Friday, July 1, 2022

Latest Posts

ಸಮಕಾಲೀನ ಸಮಸ್ಯೆಗೆ ಕೇಂದ್ರ ಸರಕಾರದಿಂದ ಸ್ಪಂದನೆ: ಶಾಸಕ ಡಾ. ವೈ. ಭರತ್ ಶೆಟ್ಟಿ

ಹೊಸದಿಗಂತ ವರದಿ, ಮಂಗಳೂರು

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು ಸುಧಾರಣೆಗಳು ಆಗಿವೆ. ಈಗಿನ ತಲೆಮಾರಿಗೆ ಉಪಯೋಗವಿಲ್ಲದ ಅನೇಕ ಕಾಯಿದೆಗಳಿಗೆ ತಿದ್ದುಪಡಿ ಅಥವಾ ಬದಲಾವಣೆ ಮಾಡುವ ಅಗತ್ಯವನ್ನು ಕೇಂದ್ರ ಸರಕಾರ ಮನಗಂಡಿದೆ. ಆ ಮೂಲಕ ಸಮಕಾಲೀನ ಸಮಸ್ಯೆಗಳಿಗೆ ಕೇಂದ್ರ ಸರಕಾರ ಸ್ಪಂದಿಸಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಆಯೋಜಿಸಲಾದ ಎರಡು ದಿನಗಳ ಮಂಡಲ ಪ್ರಶಿಕ್ಷಣ ವರ್ಗವನ್ನು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಷಿತಾ ಸಭಾಂಗಣದಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ, ರಾಜ್ಯ ಸರಕಾರಗಳ ಯೋಜನೆ, ಕಾರ್ಯಕ್ರಮಗಳ ಮಾಹಿತಿ, ಮುಂದಿನ ಚುನಾವಣೆಗಳನ್ನು ಎದುರಿಸುವ ಬಗ್ಗೆ ಅಭ್ಯಾಸ ವರ್ಗದಲ್ಲಿ ಚರ್ಚಿಸಲಾಗುವುದು ಎಂದರು.

ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಹ ಸಂಚಾಲಕ ಸುಧಾಕರ್ ಆಚಾರ್ಯ, ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ರಾಜೇಶ್ ಶೆಟ್ಟಿ ಸಲ್ಲಾಜೆ, ಮಂಡಲ ಪ್ರಶಿಕ್ಷಣದ ಎಲ್ಲ ಅಪೇಕ್ಷಿತ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss