Monday, August 8, 2022

Latest Posts

ಸಮಚಿತ್ತ ಭಾವದಿಂದ ಉಪ ಚುನಾವಣೆ ಫಲಿತಾಂಶ ಸ್ವೀಕರಿಸುತ್ತೇವೆ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್ :

ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂಬುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದಿದ್ದಾರೆ.
ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss