Thursday, August 11, 2022

Latest Posts

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸುವ ಕೆಲಸ ಮಾಡಿ!

ಹೊಸದಿಗಂತ ವರದಿ,ಮೈಸೂರು:

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಚುನಾಯಿತ ಬಿಜೆಪಿಯ ಗ್ರಾಮಪಂಚಾಯತಿ ಸದಸ್ಯರು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ತಿಳಿಸಿದರು.

ಸೋಮವಾರ ನಗರದ ಕಲಾಮಂದಿರ ದಲ್ಲಿ ನಡೆದ ಬಿಜೆಪಿ ಜನ ಸೇವಕ ಸಮಾವೇಶದಲ್ಲಿ ಪ್ರಾಸ್ತಾವಿಕ ವಾಗಿ ಮಾತನಾಡಿದ ಅವರು, ಜನರು ನಿಮ್ಮ ಮೇಲೆ ನಂಬಿಕೆ, ವಿಶ್ವಾಸವಿಟ್ಟು, ಗ್ರಾ.ಪಂ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವಂತೆ ಜನಸೇವಕರಾಗಿ, ಪ್ರಾಮಾಣಿಕ ವಾಗಿ ಕೆಲಸ ಮಾಡಬೇಕು, ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕ ದಲ್ಲಿ ದ್ದು, ಸರ್ಕಾರದ ಯೋಜನೆಯನ್ನು ಗ್ರಾಮದಲ್ಲಿ ಪರಿಣಾಮ ಕಾರಿಯಾಗಿ ಜಾರಿಯಾಗುವಂತೆ ನೋಡಿಕೊಂಡು, ಯೋಜನೆಯ ಫಲವನ್ನು ಜನರಿಗೆ ಮುಟ್ಟಿಸಬೇಕು, ಗ್ರಾಮದಲ್ಲಿ ಪಕ್ಷದ ಚಟುವಟಿಕೆಗಳನ್ನು ನಡೆಸಿ, ಪಕ್ಷದ ಸಂಘಟನೆ ಮಾಡಿ, ಜನರ ಮನಸ್ಸು ಗೆಲ್ಲಬೇಕು, ಜನರು ಕೊಟ್ಟಿರುವ ಜವಾಬ್ದಾರಿ ಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss