Friday, July 1, 2022

Latest Posts

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಫೆ.13ರಂದು ಕರ್ನಾಟಕ ಬಂದ್

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆ.13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್, ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ವರ್ಷ ನ.4 ರಿಂದ  ಮೌರ್ಯ ವೃತ್ತದಲ್ಲಿ ಧರಣಿ ನಡೆಸಲಾಗುತ್ತಿದೆ. 93 ದಿನ ಪೂರೈಸಿರುವ ಧರಣಿಗೆ ಹಲವು ರಾಜಕೀಯ ನಾಯಕರು, ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದರು ಎಂದು ತಿಳಿಸಿದರು.

ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಡಾ.ಸರೋಜಿನಿ ಮಹಿಷಿ ನೀಡಿರುವ ವರದಿಯನ್ನು ಜಾರಿಗೊಳಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಸರೋಜಿನಿ ಮಹಿಷಿ ವರದಿ ಜಾರಿಯಿಂದ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ದೊರೆತು ನಮ್ಮ ರಾಜ್ಯದ ಮಂದಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಫೆ.13ರಂದು ಬಂದ್ ಗೆ ಕರೆ ನೀಡಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss