Saturday, August 13, 2022

Latest Posts

ಸರ್ಕಾರದ ಮಾರ್ಗಸೂಚಿಯಂತೆ ವಲಸೆ ಕಾರ್ಮಿಕರ ಕ್ವಾರಂಟೈನ್, ಈ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಬೇಡ: ಜಿಲ್ಲಾಧಿಕಾರಿ

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಅದರಂತೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರನ್ನು ನಿಗದಿತ ಅವಧಿಯವರೆಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಿದ ನಂತರ ಅವರನ್ನು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡು ಮನೆ ದಿಗ್ಬಂಧನ (ಹೋಮ್ ಕ್ವಾರಂಟೈನ್) ಕ್ಕಾಗಿ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಾಗಿ ಸರ್ಕಾರ ನಿರ್ದೇಶಿಸಿರುವ ಸ್ಟಾö್ಯಂಡರ್ಡ್ ಆಪರೇಟಿಂಗ್ ಪ್ರೋಸಿಜರ್ (ಎಸ್‌ಓಪಿ) ಅನುಸರಿಸಲಾಗುತ್ತಿದೆ. ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸುವಾಗ ಅವರಿಗೆ ಸ್ಟಾö್ಯಂಪಿAಗ್ ಮತ್ತು ಹೆಲ್ತ್ ಸ್ಕಿçÃನಿಂಗ್ ಮಾಡಿ ವೈದ್ಯಕೀಯ ಪ್ರಮಾಣ ಪತ್ರ ನೀಡಲಾಗುತ್ತಿದೆ. ವಲಸೆ ಕಾರ್ಮಿಕರ ಮನೆಗೆ ಪೋಸ್ಟರ್ ಅಂಟಿಸುವ ಜೊತೆಗೆ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳಿಂದ ನಿಗಾವಹಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಯಾವುದೇ ರೀತಿಯ ಗೊಂದಲ ಮತ್ತು ಆತಂಕ ಬೇಡ ಎಂದು ಮನವಿ ಮಾಡಿದರು.
ಸಾರ್ವಜನಿಕರು ಕೂಡ ಮನೆ ದಿಗ್ಬಂಧನಲ್ಲಿರುವವರಿಗೆ ಯಾವುದೇ ರೀತಿಯ ತೊಂದರೆ ಕೊಡದೆ ಸಹಕರಿಸಬೇಕು. ಅಕ್ಕಪಕ್ಕದ ಮನೆಯವರು ಅಥವಾ ಇತರೆ ಯಾವುದೇ ವ್ಯಕ್ತಿಗಳು ದಿಗ್ಬಂಧನದಲ್ಲಿದ್ದವರ ಮನೆಗೆ ಹೋಗಬಾರದು. ಒಂದು ವೇಳೆ ಮನೆ ದಿಗ್ಬಂಧನದಲ್ಲಿರುವವರು ಮನೆ ಬಿಟ್ಟು ಹೊರಗಡೆ ಓಡಾಡುವುದು ಕಂಡುಬAದಲ್ಲಿ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಅಥವಾ ಜಿಲ್ಲಾಡಳಿತದ ಕಂಟ್ರೋಲ್ ರೂಮ್:08473 253950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಅವರು ಸಾರ್ವಜನಿಕರಲ್ಲಿ ಕೋರಿದರು.
ಪಾಸಿಟಿವ್ ಬಂದ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲು: ಕನಿಷ್ಠ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿಯನ್ನು ಮುಕ್ತಾಯಗೊಳಿಸಿದವರುನ್ನು ಸರ್ಕಾರದ ಮಾರ್ಗಸೂಚಿಯಂತೆ ಅವರಿಗೆ ಸ್ಟಾö್ಯಂಪಿAಗ್ ಮತ್ತು ಹೆಲ್ತ್ ಸ್ಕಿçÃನಿಂಗ್ ಮಾಡಿ ಮನೆ ದಿಗ್ಬಂಧನಕ್ಕಾಗಿ ಕಳುಹಿಸಬಹುದಾಗಿದೆ. ಅದರಂತೆ ಜಿಲ್ಲೆಯಲ್ಲಿ ಈಗಾಗಲೇ ನಿಗದಿತ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ ಸುಮಾರು 15 ದಿನಗಳ ಅವಲೋಕನ ಅವಧಿಯನ್ನು ಪೂರೈಸಿದ ವಲಸೆ ಕಾರ್ಮಿಕರ ಗಂಟಲು ದ್ರವ ಮಾದರಿಯನ್ನು ಮೇ 22 ಮತ್ತು 23 ರಂದು ಪಡೆದು ಮನೆ ದಿಗ್ಬಂಧನಕ್ಕಾಗಿ ಮೇ 30ರಂದು ಕಳುಹಿಸಲಾಗಿರುತ್ತದೆ. ಬಿಡುಗಡೆ ಹೊಂದಿದ ಕೆಲವರಲ್ಲಿ ಪಾಸಿಟಿವ್ ವರದಿ ಬಂದಿರುವ ಪ್ರಯುಕ್ತ ತಕ್ಷಣ ಅಂತಹವರನ್ನು ಗುರುತಿಸಿ ನಿಗದಿತ ಆಸ್ಪತ್ರೆಗೆ ಕರೆತಂದು ಅವಲೋಕನೆಗಾಗಿ ಇರಿಸಲಾಗಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಅಥವಾ ಭಯಪಡಬಾರದು ಎಂದು ಅವರು ಮನವಿ ಮಾಡಿದರು.
18 ಜನ ಗುಣಮುಖ: ಜಿಲ್ಲೆಯ ಪಾಸಿಟಿವ್ ಸಕ್ರಿಯ ಪ್ರಕರಣಗಳಲ್ಲಿ ಮೇ 31ರಂದು 18 ಜನ (ಪಿ-867, ಪಿ-868, ಪಿ-1448, ಪಿ-1733, ಪಿ-1743, ಪಿ-1755, ಪಿ-1757, ಪಿ-1762, ಪಿ-1855, ಪಿ-1874, ಪಿ-1901, ಪಿ-1910, ಪಿ-1890, ಪಿ-1903, ಪಿ-1904, ಪಿ-1885, ಪಿ-1880, ಪಿ-1881) ಗುಣಮುಖ ಹೊಂದಿದ್ದು, ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ, ಮನೆ ದಿಗ್ಬಂಧನಕ್ಕಾಗಿ ಕಳುಹಿಸಲಾಗಿರುತ್ತದೆ. ಅದರಂತೆ ಮೇ 26ರಂದು ಪಿ-1139, ಪಿ-1140, ಪಿ-1141, ಪಿ-1188, ಪಿ-1189, ಪಿ-1190, ಪಿ-1191, ಪಿ-1192, ಪಿ-1256 ಮತ್ತು ಮೇ 30ರಂದು ಪಿ-1758, ಪಿ-1874 ಇವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ. ಮೇ 31ರವರೆಗೆ ಒಟ್ಟು 29 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸರ್ಕಾರದ ನಿರ್ದೇಶನದಂತೆ ಹಂತಹAತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಕೊರೊನಾ ವೈರಸ್‌ಗೆ ಔಷಧಿ ಇಲ್ಲ. ಮುಂಜಾಗ್ರತಾ ಕ್ರಮಗಳೇ ಇದಕ್ಕೆ ಪರಿಹಾರ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಪಾಲನೆ ಮಾಡಬೇಕು. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮುಖಕ್ಕೆ ಮಾಸ್ಕ್ಗಳನ್ನು ಧರಿಸಬೇಕು. ಈ ಬಗ್ಗೆ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ, ಎನ್‌ಜಿಓ, ಸಂಘ-ಸAಸ್ಥೆಗಳು ಮತ್ತು ಮಾಧ್ಯಮದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಜನಪ್ರತಿನಿಧಿಗಳು, ಸಂಘ-ಸAಸ್ಥೆಗಳು ಸೇರಿದಂತೆ ಪ್ರತಿಯೊಬ್ಬ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಗುರುತಿಸಲಾದ 5 ಕಂಟೇನ್ಮೆAಟ್ ಝೋನ್‌ಗಳಲ್ಲಿ “ಸಿಝಡ್ ಆ್ಯಪ್” ಮೂಲಕ ಶೇ.92.96ರಷ್ಟು ಸರ್ವೇ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಮತಗಟ್ಟೆ ಅಧಿಕಾರಿಗಳು, ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಿಂದ “ಹೆಲ್ತ್ ವಾಚ್ ಆ್ಯಪ್” ಮೂಲಕ ನಡೆಸುತ್ತಿರುವ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಕಾರ್ಯ ಶೇ.81.92ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಟೆಸ್ಟ್ ಪೂರ್ವಭಾವಿಯಾಗಿ ನಡೆಸುವ 2 ಟ್ರೂನ್ಯಾಟ್ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಷಿನ್ ಬಂದ ನಂತರ ಜಿಲ್ಲೆಯಲ್ಲಿಯೇ ಕೋವಿಡ್-19 ಪರೀಕ್ಷೆ ನಡೆಸಬಹುದು. ವೈದ್ಯರು, ತಜ್ಞ ವೈದ್ಯರು, ಮೈಕ್ರೋಬಯಾಲಜಿಸ್ಟ್ ಇಚ್ಛಿತ ವೈದ್ಯರು ಸ್ವಇಚ್ಛೆಯಿಂದ ಸೇವೆ ಸಲ್ಲಿಸಲು ಮುಂದೆ ಬಂದಲ್ಲಿ ಮೊದಲು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
53 ಜನರ ಬಂಧನ; 105 ಎಫ್.ಐ.ಆರ್: ಕೋವಿಡ್-19 ವೈರಾಣು ಇಡೀ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ಗಡಿ ಭಾಗದಲ್ಲಿ ಒಟ್ಟು 16 ಚೆಕ್‌ಪೋಸ್ಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಮೇ 31ರವರೆಗೆ ಒಟ್ಟು 1657 ವಾಹನಗಳನ್ನು ಜಪ್ತಿ ಮಾಡಲಾಗಿದೆ. 53 ಜನರನ್ನು ಬಂಧಿಸಲಾಗಿದ್ದು, ಒಟ್ಟು 105 ಎಫ್.ಐ.ಆರ್ ದಾಖಲಾಗಿವೆ ಮತ್ತು 30,74,100 ರೂ. ದಂಡ ವಿಧಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್ ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss