Tuesday, August 16, 2022

Latest Posts

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ‌ ನೌಕರರಿಗೆ ಸಾಂದರ್ಭಿಕ ರಜೆ ಘೋಷಣೆ ಮಾಡಿದೆ.
ಕಂಟೇನ್ಮೆಂಟ್ ಪ್ರದೇಶದಲ್ಲಿ ವಾಸವಾಗಿರುವವರು, ಕಚೇರಿಗೆ ಬರಲು ಸಾಧ್ಯವಾಗದವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿರುವ ಸರ್ಕಾರ, ಕರ್ನಾಟಕ ಸಿವಿಲ್ ಸೇವೆಗಳ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿದೆ. ಕಂಟೇನ್ಮೆಂಟ್ ಪ್ರದೇಶದಲ್ಲಿ ವಾಸವಾಗಿರುವ ಸರ್ಕಾರಿ ನೌಕರರು ಕಚೇರಿಗೆ ಬರಲು ಸಾಧ್ಯವಾಗದ ನೌಕರರಿಗೆ 7 ದಿನಗಳವರೆಗೆ, ಕೊರೋನಾ ಸೋಂಕಿನಿಂದ ಕ್ವಾರಂಟೈನ್ ಗೆ ಒಳಗಾದ ನೌಕರರು 14 ದಿನ ಸಾಂದರ್ಭಿಕ ರಜೆ ಪಡೆಯಬಹುದು ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss