Tuesday, July 5, 2022

Latest Posts

ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ: ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಸರ್ಕಾರದ ಕ್ರಮ

ಹೊಸದಿಗಂತ ವರದಿ,ಶಿವಮೊಗ್ಗ:

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್.ಈಶ್ವರಪ್ಪ ಹೇಳಿದರು.

ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಲೆಗಳಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್, ಓವರ್ಹೆಡ್ ಪ್ರೋಜೆಕ್ಟರ್, ಲ್ಯಾಪ್ ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿ ಅನುದಾನವನ್ನು ಕಾಯ್ದಿರಿಸಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss