ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸರ್ಕಾರ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ಶೀಘ್ರದಲ್ಲಿಯೇ ನಿರ್ಣಯಿಸಲಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಹೆಣ್ಣು ಮಕ್ಕಳು ಮದುವೆಯಾಗುವುದಕ್ಕೆ ಕನಿಷ್ಟ ಎಷ್ಟು ವಯಸ್ಸಾಗಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರದಲ್ಲಿಯೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಶುಕ್ರವಾರ  ವಿಡಿಯೋ ಕಾನ್ಫರೆನ್ಸ್ ಮೂಲಕ ​ ಎಫ್​ಎಒ ನ 75ನೇ ವಾರ್ಷಿಕೋತ್ಸವದಲ್ಲಿ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಿ ಮಾತಾನಾಡಿ, ಹೆಣ್ಣುಮಕ್ಕಳ ಮದುವೆ ಆಗಲು ಕನಿಷ್ಟ ಎಷ್ಟು ವಯಸ್ಸು ಆಗಿರಬೇಕು ಎಂಬ ಬಗ್ಗೆ ಅಧ್ಯಯನ ನಡೆಯುತ್ತಿದ್ದು, ಅಧ್ಯಯನದ ಆಧಾರದ ಮೇಲೆ ಸರ್ಕಾರ ಆ ಬಗ್ಗೆ  ನಿರ್ಣಯ ತೆಗೆದುಕೊಳ್ಳಲಿದೆ. ಈಗಾಗಲೆ ಈ ಕುರಿತಂತೆ ಸಮಿತಿ ರಚಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ. ಕಳೆದ ಆರು ವರ್ಷಗಳಿಂದ ಗಂಡು ಮಕ್ಕಳ ನೋಂದಣಿಗಿಂತ ಹೆಣ್ಣುಮಕ್ಕಳ ನೋಂದಣಿಗಿಂತ ಸಂಖ್ಯೆ ಹೆಚ್ಚಿದೆ. ಇದಕ್ಕೆ ಸರ್ಕಾರ ಬಹಳ ಪ್ರಯತ್ನಿಸಿತ್ತು ಎಂದು ಹೇಳಿದರು.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss