spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಲಾದಹಳ್ಳಿ ಮರ್ಯಾದೆ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಯುವತಿಯ ತಂದೆ ಬಂಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ವಿಜಯಪುರ:

ಜಿಲ್ಲೆಯ ಸಲಾದಹಳ್ಳಿಯ ಯುವಪ್ರೇಮಿಗಳ ಮರ್ಯಾದೆ ಹತ್ಯೆ, ಜೋಡಿ ಕೊಲೆಗೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಯಾದ ಯುವತಿಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ನೂತನ ವರಿಷ್ಠಾಧಿಕಾರಿ ಆನಂದಕುಮಾರ ಅವರು, ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಜಿಲ್ಲೆಯ ಸಲಾದಹಳ್ಳಿಯ ಬಸವರಾಜ ಮಡಿವಾಳಪ್ಪ ಬಡಿಗೇರ ಉರ್ಫ್ ಮಾದರ ಹಾಗೂ ದಾವಲಬಿ ಬಂದಿಗಿಸಾಬ್ ತಂಬದ ಎಂಬ ಈ ಯುವಜೋಡಿ ಕೊಲೆಯ 5 ನೇ ಆರೋಪಿಯಾಗಿದ್ದ, ಬಂದಗಿಸಾಬ್ ಕಾಶೀಮಸಾಬ್ ತಂಬದ ಈತನನ್ನು ಬಂಧಿಸಿ, ಮೊದಲನೆಯ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.
ಕಳೆದ ಒಂದು ತಿಂಗಳ ಹಿಂದೇ ಈ ಯುವಜೋಡಿಗಳು ಒಟ್ಟಿಗೆ ಇದ್ದವೇಳೆ, ಐದು ಜನ ಆರೋಪಿಗಳು ಹರಿತವಾದ ಆಯುಧಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಾತೀರ ಭಾಗದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳತನದ ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ 20 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ, ರೇವಣಸಿದ್ದ ಗುರಪ್ಪ ಬಿರಾದಾರ ಹಾಗೂ ಸುರೇಶ ರಾವುತರಾಯ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ ಎಂದರು.
ಈ ಬಂಧಿತ ಆರೋಪಿಗಳಿಂದ ವಿವಿಧ ಕಂಪನಿಯ 9.30 ಲಕ್ಷ ಮೌಲ್ಯದ 20 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss