ಬೆಂಗಳೂರು: ಸಲೂನ್ ಮತ್ತು ಸ್ಪಾಗಳಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 7 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಸ್ಪಾ ಮಾಲೀಕ ಸಿದ್ದಾರ್ಥ ಎಂಬುವವನು ತಲೆಮರೆಸಿಕೊಂಡಿದ್ದಾನೆ. ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಕೋ ಬಾಡಿ ಸ್ಪಾ ಆ್ಯಂಡ್ ಸಲೂನ್ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿ 7 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ಕುರಿತು ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.