Sunday, August 14, 2022

Latest Posts

ಸವಾಲುಗಳ ನಡುವೆ ಅಭಿವೃದ್ಧಿಗಳಿಗೆ ಆದ್ಯತೆ : ಸಚಿವ ಕೆ. ಗೋಪಾಲಯ್ಯ

ಹಾಸನ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಅವಧಿಯಲ್ಲಿ ಕರ್ನಾಟಕದ 21 ಜಿಲ್ಲೆಗಳಲ್ಲಿನ ಲಕ್ಷಾಂತರ ಕುಟುಂಬಗಳು ನೆರೆಹಾವಳಿಯಿಂದ ತೊಂದರೆಗೊಳಗಾಗಿದ್ದು, ನೆರೆ ಸಂತ್ರಸ್ಥರ ಪ್ರತಿ ಕುಟುಂಬಕ್ಕೂ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿ ಪ್ರತಿಯೊಬ್ಬರಿಗೂ ಮುಖ್ಯಮಂತ್ರಿಯವರು ನೆರವಾಗಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ.
ಹಾಸನದ ನಗರಸಭೆ ಸಭಾಂಗಣದಲ್ಲಿಂದು ನಡೆದ ಮುಖ್ಯಮಂತ್ರಿಯವರ ನೇರ ಪ್ರಸಾರ ಕಾರ್ಯಕ್ರಮ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಯವರು ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶ ಮೆಚ್ಚುವಂತೆ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಜನರಿಗೆ ವಿವಿಧ ಯೋಜನೆಗಳ ಮೂಲಕ ನೆರವಾಗಿದ್ದಾರೆ ಎಂದರು.
ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದೆಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಕಾರ್ಡ್‍ಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಮತ್ತು ಹೊರ ರಾಜ್ಯದಿಂದ ಬಂದ ನಿರಾಶ್ರತರಿಗೂ 3 ತಿಂಗಳಿಗಾಗುವಷ್ಟು 30 ಕೆ.ಜಿ. ಪಡಿತರ ನೀಡುವ ಮೂಲಕ ನೆರವು ನೀಡಲಾಗಿದೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿನ ಲಕ್ಷಾಂತರ ಕುಟುಂಬಕ್ಕೆ ಉಜ್ವಲ ಯೋಜನೆಯಡಿ 3 ತಿಂಗಳು ಉಚಿತ ಗ್ಯಾಸ್ ನೀಡುವ ಮೂಲಕ ಬಡವರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸಿ ಮುಂದಿನ ನಂಬರ್ ಮಾಹೆಯವರಿಗೆ ಪ್ರತಿಯೊಬ್ಬ ವ್ಯಕ್ತಿಗೆ ತಲಾ 5 ಕೆ.ಜಿ ಯಂತೆ 1.27 ಕೋಟಿ ಪಡಿತರ ಕಾರ್ಡ್ ಹೊಂದಿದವರಿಗೆ ಮತ್ತು ನಿರಾಶ್ರತರಿಗೆ ಒಟ್ಟಾರೆ 4.32 ಕೋಟಿ ಜನರಿಗೆ ಪಡಿತರ ನೀಡುವ ಕಾರ್ಯ ಮುಂದುವರೆಯುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಹೇಳಿದರು.

ಕೋವಿಡ್-19 ಪ್ರಾರಂಭವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ಪ್ರಾಣ ರಕ್ಷಣೆ ಬಹು ಮುಖ್ಯವಾದ ಕಾರಣ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲಿ ಸ್ವಲ್ಪ ವಿಳಂಬವಾಗಿದೆ ಮುಂದಿನ ದಿನಗಳಲ್ಲಿ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗಾಗಿ ಕೋವಿಡ್ ಆಸ್ಪತ್ರೆಯಲ್ಲಿ 400 ಬೆಡ್‍ಗಳು ಹಾಗೂ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಕೋವಿಡ್ ಕೇರ್ ಕೇಂದ್ರದಲ್ಲಿ 300 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತಕ್ಕೆ 290 ಬೆಡ್‍ಗಳನ್ನು ನೀಡಲು ಒಪ್ಪಿಗೆ ಸೂಚಿಸಿವೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಕೃಷಿ ಕಾಲೇಜಿನಲ್ಲಿ 400 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದ್ದು, ತುರ್ತು ಪರೀಸ್ಥಿತಿ ಉದ್ಭವವಾದರೆ 48 ಗಂಟೆಗಳಲ್ಲಿ ಪೂರ್ಣ ಸಿದ್ದತೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ನಿಗದಿಪಡಿಸಿದ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು ಹಾಗೂ ಚಿಕಿತ್ಸೆಗೆ ನಿರಾಕರಿಸಿದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ: 9449843200, ಹಾಗೂ ಜಿಲ್ಲಾ ಸಹಾಯವಾಣಿ ಸಂಖ್ಯೆ: 08172-246575ಗೆ ತಿಳಿಸಿದರೆ ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss