ಬೆಳಗಾವಿ :ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ನಮ್ಮ ಸರ್ಕಾರಕ್ಕೆ ಮೊದಲ ವರ್ಷವು ಸಾಲು ಸಾಲು ಸವಾಲುಗಳ ವರ್ಷವಾಗಿದೆ.ಕಳೆದ ಆಗಸ್ಟ್ ನಲ್ಲಿ ಉಂಟಾದ ಭೀಕರ ಪ್ರವಾಹ ನಂತರದಲ್ಲಿ ಎದುರಾದ ಕೊರೋನಾ ಸಾಂಕ್ರಾಮಿಕ ರೋಗದ ಸವಾಲುಗಳ ಮಧ್ಯೆಯೂ ಪರಿಹಾರದ ಸ್ಪರ್ಶವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಇಡೀ ದೇಶದಲ್ಲಿಯೇ ಮೊದಲು ಮುಂದಾದ ರಾಜ್ಯ ಕರ್ನಾಟಕವಾಗಿದೆ. ಮೊದಲು ಲಾಕ್ಡೌನ್ ಘೋಷಿಸಿದ ರಾಜ್ಯ ಕರ್ನಾಟಕ. ಸಂಕಷ್ಟದಲ್ಲಿದ್ದ ಜನರಿಗೆ ಮೊದಲು ಪ್ಯಾಕೇಜ್ ಘೋಷಣೆ ಮಾಡಿದ್ದೂ ಕೂಡ ಕರ್ನಾಟಕ ಎಂದರು.
ಈ ಸಂದರ್ಭದಲ್ಲಿ ರೈತರು, ಕಾರ್ಮಿಕರು, ನೇಕಾರರು, ಕ್ಷೌರಿಕರು, ಟ್ಯಾಕ್ಸಿ ಚಾಲಕರು, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರ ಸಂಕಷ್ಟಗಳಿಗೆ ಸ್ಪಂದಿಸಿರುವ ಸರ್ಕಾರವು, ಕೊರೋನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿದೆ.
ಅನೇಕ ಸವಾಲುಗಳ ನಡುವೆ ನಮ್ಮ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ಮತ್ತು ಕೋವಿಡ್ ನಿಯಂತ್ರಣ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು
ಸಚಿವರ ರಮೇಶ ಜಾರಕಿಹೊಳಿ ತಿಳಿಸಿದರು.
ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.