Monday, July 4, 2022

Latest Posts

ಸಾಂಪ್ರಾಯಿಕ-ಸಾಂಸ್ಕೃತಿಕವಾಗಿ ಶ್ರೀರಂಗಪಟ್ಟಣ ದಸರಾ ಸರಳ ಆಚರಣೆಗೆ ನಿರ್ಧಾರ

ಮಂಡ್ಯ : ಸಾಂಪ್ರಾದಾಯಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀರಂಗಪಟ್ಟಣ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದರು.

ಪಟ್ಟಣದ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೋನ ಮಹಾಮರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕøತಿವಾಗಿ ಸರಳವಾಗಿ ಆಚರಿಸೋಣ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಂಡ ಈ ಸರಳ ದಸರಾ ಪ್ರದರ್ಶನದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಯಾಗಿ ಆಚರಿಸೋಣ ಎಂದು ಹೇಳಿದರು.

ನಗರದ ಪ್ರಮುಖ ಬೀದಿಗಳಗೆ ದೀಪ ಅಲಂಕಾರ ಮಾಡಲಾಗುತ್ತಿದೆ ಮತ್ತು 24 ರಂದು ಮಧ್ಯಾಹ್ನ 3 ಗಂಟೆಗೆ ಬನ್ನಿ ಮಂಟಪಕ್ಕೆ ಪೂಜೆ ಸಲ್ಲಿಸಿ ಬಾಳೆ ಗಿಡ ಕಡಿದ ಬಳಿಕ ಶ್ರೀ ಚಾಮುಂಡೇಶ್ವರಿ ಹಾಗೂ ಗಣಪತಿಗೆ ಪೂಜೆ ಮಾಡಿ ರಥೋತ್ಸವನ್ನು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡುವ ಮೂಲಕ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೆರವಣಿಗೆ ಮುಕ್ತಾಯ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ ಮೂರು ದಿನಕೊಮ್ಮೆ ಬನ್ನಿ ಮಂಟಪ ಹಾಗೂ ಕಲ್ಯಾಣಿ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ಪುರಸಭೆಯಿಂದ ಮಾಡಬೇಕು ಮತ್ತು ಬಾಬುರಾಯನಕೊಪ್ಪಲಿನಿಂದ ಕೆ.ಆರ್.ಎಸ್ ವರೆಗೂ ಇರುವ ರಸ್ತೆಯ ಡಿವೈಡರ್ ಅನ್ನು ಶುಚಿತ್ವಗೋಳಿಸಿ ಬಣ್ಣ ಬಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜುಲ್ಫಿಕರ್ ಉಲ್ಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮï, ಉಪ ವಿಭಾಗ ಅಧಿಕಾರಿಗಳು ಮತ್ತು ದಸರಾ ಉಪಸಮಿತಿಯ ಅಧ್ಯಕ್ಷರಾದ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶಿಲ್ದಾರ ರೂಪ ಮತ್ತು ದೇವಸ್ಥಾನದ ಮುಖ್ಯ ಅರ್ಚಕರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss