Wednesday, July 6, 2022

Latest Posts

ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಹೊಸ ದಿಗಂತ, ಆನ್ ಲೈನ್ ಡೆಸ್ಕ್ :

ಮುಂಬೈ ನಗರದ ಕಾಂದಿವಲಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದು , ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಗಳನ್ನು ಸುಭಾಷ್ ಖೋಡೆ (25) ಹಾಗೂ ಯುವರಾಜ್ ಪವಾರ್(25) ಎಂದು ಗುರುತಿಸಲಾಗಿದೆ. ದುರಂತದಲ್ಲಿ ಗಾಯಗೊಂಡಿದ್ದ ಮೂವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.
ಈ ಮೂವರು ದೇವಸ್ಥಾನದ ಬಾಗಿಲನ್ನು ಮುಚ್ಚಿ ಒಳಗೆ ಮಲಗಿದ್ದರು ಎನ್ನಲಾಗಿದ್ದು. ಭಾನುವಾರ ಬೆಳಗ್ಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss