Monday, July 4, 2022

Latest Posts

ಸಾರ್ವಜನಿಕರು ರೋಗ ಲಕ್ಷಣ ಮುಚ್ಚಿಡದೇ , ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಡಿಸಿ

ಭಟ್ಕಳ: ಸಾರ್ವಜನಿಕರು ರೋಗ ಲಕ್ಷಣ ಮುಚ್ಚಿಡದೇ ಸ್ವತ: ಮುಂದೆ ಬಂದು ತಮ್ಮ ಆರೋಗ್ಯದ ಬಗ್ಗೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಹೇಳಿದರು.
ಮಂಗಳವಾರ ಭೇಟಿ ನೀಡಿದ್ದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸೋಂಕು ಲಕ್ಷಣ ಕಂಡು ಬಂದಲ್ಲಿ ತಾವೇ ಔಷಧಿ ತೆಗೆದುಕೊಳ್ಳದೇ ತಾಲ್ಲೂಕಾಸ್ಪತ್ರೆ ಅಥವಾ ಆಯಾ ವಾರ್ಡನಲ್ಲಿ ಆರಂಭಿಸಿರುವ ಜ್ವರ ತಪಾಸಣೆ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಪ್ರತಿಯೊಂದು ಮನೆಯಲ್ಲಿ ಎಷ್ಟು ಜನ ವೃದ್ದರು, ರೋಗಿಗಳು ಇದ್ದಾರೆ ಎಂಬ ಮಾಹಿತಿ ನಮ್ಮ ಬಳಿ ಇದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಬಂದಾಗ ಸಾರ್ವಜನಿಕರು ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂದರು. ಸಾಮಾಜಿಕ ಜಾಲತಾಣದಲ್ಲಿ ಮತ್ತು ಪತ್ರಿಕೆಗಳಲ್ಲಿ ಸುಳ್ಳು ಸುದ್ದಿ ಹಾಗೂ ಕೊರೋನಾ ರೋಗಿಗಳ ಭಾವಚಿತ್ರ, ಹೆಸರು ಪ್ರಕಟಿಸುವುದರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಒಂದು ವಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ವೈದ್ಯರುಗಳಿಗೂ ಸೋಂಕು ತಗುಲಿದೆ. ಇದು ರೋಗಿಗಳು ಸುಳ್ಳು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಬಂದಿದೆ. ಅಲ್ಲದೇ ಸೋಂಕನ್ನು ಮತ್ತಷ್ಟು ಉಲ್ಫಣಗೊಳಿಸುತ್ತಿದ್ದಾರೆ. ಇನ್ನು ಮುಂದೆ ಪ್ರತಿಯೊಂದು ಮನೆಗೆ ತೆರಳಿ ತಪಾಸಣೆ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹೊರಗಿನಿಂದ ಯಾರೇ ಬಂದರೂ ಸ್ವಯಂ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ ಜಿಲ್ಲಾಧಿಕಾರಿಗಳು, ಭಟ್ಕಳದಲ್ಲಿ ಜಾರಿ ಮಾಡಿರುವ ಲಾಕ್‌ಡೌನ್‌ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಿರುವ ಸಮಯವೇ ಮುಂದುವರಿಯಲಿದೆ ಎಂದರು. ಉಪವಿಭಾಗಾಧಿಕಾರಿ ಭರತ್ ಎಸ್, ಎಎಸ್‌ಪಿ ನಿಖಿಲ್ ಬಿ, ತಹಶೀಲ್ದಾರ್ ಎಸ್. ರವಿಚಂದ್ರ, ಸಿಪಿಐ ದಿವಾಕರ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss