ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ಆಗಸ್ಟ್ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಅಡಿ ಅಂತ್ಯೋದಯ ಅನ್ನ ಯೋಜನೆಯಲ್ಲಿ 29,380 ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಅಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಮತ್ತು ಅಂತ್ಯೋದಯ ಅನ್ನ ಯೋಜನೆ 29,380 ಪಡಿತರ ಚೀಟಿಗಳ 1,18,713 ಪ್ರತಿ ಸದಸ್ಯರಿಗೆ ತಲಾ 5 ಕೆ.ಜಿ ಅಕ್ಕಿಯಂತೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿರುತ್ತದೆ ಹಾಗೂ 2,34,070 ಬಿಪಿಎಲ್ ಪಡಿತರ ಚೀಟಿಗಳ 8,36,735 ಪ್ರತಿ ಸದಸ್ಯರಿಗೆ ಎನ್.ಎಫ್.ಎಸ್.ಎ ಅಡಿಯಲ್ಲಿ ಮತ್ತು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ತಲಾ 5 ಕೆ.ಜಿ ಅಕ್ಕಿಯಂತೆ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿದೆ. 2,34,070 ಬಿಪಿಎಲ್ ಪಡಿತರ ಚೀಟಿಗಳ ಪ್ರತಿ ಪಡಿತರ ಚೀಟಿಗಳಿಗೆ ತಲಾ 2 ಕೆ.ಜಿ ಗೋಧಿಯನ್ನು ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿದೆ. ಪಡಿತರ ಚೀಟಿದಾರರು ತಮ್ಮ ಹಕ್ಕಿನಲ್ಲಿರುವ ಅಕ್ಕಿ ಹಾಗೂ ತೊಗರಿಬೇಳೆಯನ್ನು ಆಯಾ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದುಕೊಳ್ಳಬೇಕು.
ಜಿಲ್ಲೆಯ 399 ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Point of Sale – POS Shop Module) ವ್ಯವಸ್ಥೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯನ್ವಯ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಬಹುದು. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಪಡಿತರ ಪಡೆಯುವ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊಂದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.