Thursday, March 4, 2021

Latest Posts

ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದು ಪಂಗನಾಮ ಹಾಕಿದ ವಂಚಕ!

ಹೊಸ ದಿಗಂತ ವರದಿ, ಮಡಿಕೇರಿ:

ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಮೈಸೂರಿನ ರೆಹಮತ್‍ವುಲ್ಲಾ ಎಂಬಾತನೇ ಜನರಿಗೆ ವಂಚಿಸಿರುವ ವ್ಯಕ್ತಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ನ್ಯೂ
ಡೈಮಂಡ್ ಮಲ್ಟಿ ಪರ್ಪಸ್ ಕೋ ಆಪರೇಟಿವ್ ಸೊಸೈಟಿ ಶಾಖೆಯನ್ನು ಕುಶಾಲನಗರದಲ್ಲಿ ಆರಂಭಿಸುವುದಾಗಿ, ಕಳೆದ ಐದು ತಿಂಗಳ ಹಿಂದೆ ಕಚೇರಿಯನ್ನು ಆರಂಭಿಸಿದ್ದನಂತೆ. ಬಳಿಕ ಸ್ಥಳೀಯ ಜನರನ್ನು ಸಿಬ್ಬಂದಿಯಾಗಿ ನೇಮಿಸಿಕೊಂಡು ಸುತ್ತಮುತ್ತಲ ಹಳ್ಳಿಗಳ 300 ಜನರಿಂದ ತಲಾ ಐದು ಸಾವಿರ ರೂ.ಯಂತೆ 15 ಲಕ್ಷ ಹಣ ಸಂಗ್ರಹಿಸಿರಿವುದಾಗಿ ಹೇಳಲಾಗಿದೆ.
ಐದು ಸಾವಿರ ಕಟ್ಟಿದರೆ, ಒಂದು ಲಕ್ಷ ಸಾಲ ಕೊಡುವುದಾಗಿಯೂ, ಅದನ್ನು ಎರಡು ವರ್ಷಗಳಲ್ಲಿ ಸಾಲ ಪಡೆದವರು ತೀರಿಸಬೇಕೆಂದು ಷರತ್ತು ವಿಧಿಸಿದ್ದನೆನ್ನಲಾಗಿದೆ.ಆದರೆ ಮೂರು ತಿಂಗಳಾದರೂ ಸಂಸ್ಥೆ ಸಾಲ ನೀಡದಿದ್ದಾಗ, ಅನುಮಾನಗೊಂಡ ಕುಶಾಲನಗರ ಶಾಖೆಯ ಸಿಬ್ಬಂದಿ ನಳಿನಿ ಎಂಬವರು ಬಾಗೇಪಲ್ಲಿಗೆ ಹೋಗಿ ವಿಚಾರಿಸಿದಾಗ ನ್ಯೂ ಡೈಮಂಡ್ ಕೋ ಆಪರೇಟಿವ್ ಸೊಸೈಟಿ ಶಾಖೆ ಮುಚ್ಚಿ ಹೋಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿದ ನಳಿನಿ ಮತ್ತು ಹಣ ಕಟ್ಟಿದ್ದ ನೂರಾರು ಜನರು ರೆಹಮತ್ ವುಲ್ಲಾನಿಗೆ ಫೋನ್ ಮಾಡಿದ್ದಾಗ ಆತ ಸಂಪರ್ಕಕ್ಕೆ ಸಿಕ್ಕಿಲ್ಲ.
ಕಟ್ಟಿದ್ದ ಹಣವನ್ನು ವಾಪಸ್ ನೀಡದೆ ಮೋಸ ಮಾಡುತ್ತಿರುವುದಾಗಿ ಕೊಡಗು ಎಸ್ ಪಿ ಕಚೇರಿಗೆ ದೂರು ಸಲ್ಲಿಸಲಾಗಿದ್ದು, ಈತ ಬೆಂಗಳೂರು ಮತ್ತು ಮೈಸೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ರಿಸಷ್ಪನಿಸ್ಟ್ ಕೆಲಸ ಕೊಡಿಸುವುದಾಗಿ ಮೂರು ಲಕ್ಷ ಪಡೆದು ಮೋಸ ಮಾಡಿರುವುದಾಗಿಯೂ ಆರೋಪ ಕೇಳಿ ಬಂದಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!