ಹೊಸದಿಗಂತ ಆನ್ಲೈನ್ ಡೆಸ್ಕ್:
ಬೆಂಗಳೂರಿನಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.
ಮಾಗಡಿ ರಸ್ತೆಯ ಟೋಲ್ಗೇಟ್ ಬಳಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು, ವಿಷ್ಣುವರ್ಧನ್ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನನಿಬಿಡ ಪ್ರದೇಶ ಅದರಲ್ಲಿಯೂ ಮೆಟ್ರೋ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದೆ. ಈ ಹಿಂದೆ ಇದೇ ಜಾಗದಲ್ಲಿ ಇದ್ದ ವಿಷ್ಣುವರ್ಧನ್ ಪ್ರತಿಮೆಯನ್ನು ಕದ್ದೊಯ್ಯಲಾಗಿತ್ತು. ಇದೀಗ ಮತ್ತೆ ಪ್ರತಿಮೆ ಧ್ವಂಸಗೊಳಿಸಲಾಗಿದೆ.