ಹೊಸದಿಗಂತ ವರದಿ ವಿಜಯಪುರ:
ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಮತ್ತೆ ಐದು ಜನ ಆರೋಪಿಗಳನ್ನು ಬಂಧಿಸಿದ್ದು, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ
ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾಸೀನ ದಂದರಗಿ (25), ಕರೆಪ್ಪ ಸೊನ್ನದ (25), ಸಿದ್ದು ಬೊಮ್ಮನಜೋಗಿ (34), ಸಂಜು ಮಾನಕರ (28) ಹಾಗೂ ರವಿ ಬಂಡಿ (20) ಸೇರಿದಂತೆ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಈ ಆರೋಪಿಗಳಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ಜಪ್ತಿ ಮಾಡಲಾಗಿದ್ದು, ಇಲ್ಲಿವರೆಗೆ ಒಟ್ಟು 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಡಿವೈಎಸ್ ಪಿ ಲಕ್ಷ್ಮೀನಾರಾಯಣ, ಸಿಪಿಐ ರವೀಂದ್ರ ನಾಯ್ಕೋಡಿ, ಮಹಾಂತೇಶ ಧಾಮಣ್ಣವರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.