ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ತಮ್ಮ ಸ್ವಗ್ರಾಮಕ್ಕೆ ತೆರಳಲು ಸರ್ಕಾರ ಅನುಮತಿ ನೀಡಿದ್ದರು, ಮೆಜಸ್ಟಿಕ್ ನಲ್ಲಿ ಮಾತ್ರ ಕಾರ್ಮಿಕರ ಬಳಿ ದುಪ್ಪಟ್ಟು ಹಣ ಸುಲಗೆ ಮಾಡುತ್ತಿದ್ದಾರೆ.
ಇಂದು ಮುಂಜಾನೆ ಮೆಜೆಸ್ಟಿಕ್ ಬಸ್ ಸ್ಟಾಂಡ್ ಜನರಿಂದ ತುಂಬಿ ಹೋಗಿದ್ದು, ನಿಲ್ದಾಣದಲ್ಲಿ ಯಾರು ಅಂತರ ಕಾಯ್ದುಕೊಳ್ಳದೆ ಇರುವುದು ಮತ್ತಷ್ಟು ಆತಂಕಕಾರಿಯಾಗಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಜೊತೆ ಮಾತನಾಡಿ, ಸಿಂಗಲ್ ಫೇರ್ ನಿಗದಿ ಮಾಡಲಾಯಿತು. ವಲಸೆ ಕಾರ್ಮಿಕರು ಒಂದು ಕಡೆ ಪ್ರಯಾಣಕ್ಕೆ ನಿಗದಿಯಾಗಿರುವ ದರವನ್ನು ನೀಡಿ ತಮ್ಮ ತಮ್ಮ ಗ್ರಾಮಗಳಿಗೆ ತೆರಳ ಬಹುದೆಂದು, ಮತ್ತು ಇನ್ನೊಂದು ಬದಿಯ ದರವನ್ನು ಕಾರ್ಮಿಕ ಇಲಾಖೆ ಭರಿಸಯತ್ತದೆ ಎಂದು ವರದಿಯಾಗಿದೆ.
ಈ ಕುರಿತು ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಸಿಂಗಲ್ ಫೇರ್ ಗೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.
ಕೆಎಸ್ಆರ್ ಟಿ ಸಿ ಬಸ್ ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ "ಕಾರ್ಮಿಕ" ರಿಗೆ Single Fare ದರದಲ್ಲಿ ಹೋಗಲು ಅನುವು ಮಾಡಿಕೊಡಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದ್ದಾರೆ.
— S.Suresh Kumar, Minister – Govt of Karnataka (@nimmasuresh) May 2, 2020