Thursday, March 4, 2021

Latest Posts

ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಇನ್ನಿಲ್ಲ

ಹೊಸ ದಿಗಂತ ಆನ್ ಲೈನ್ ಡೆಸ್ಕ್

ವಿಜಯಪುರ ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ (85) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಗುಳಿಯವರನ್ನು ಜನವರಿ 9ರಂದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

1936ರ ಸೆಪ್ಟೆಂಬರ್ 29ರಂದು ಬಾಗೇವಾಡಿ ತಾಲ್ಲೂಕಿನ ಮನಗೂಳಿಯಲ್ಲಿ ಜನಿಸಿದ್ದ ಅವರ ಪೂರ್ಣ ಹೆಸರು ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಮನಗೂಳಿ ಸಿಂದಗಿ ಕ್ಷೇತ್ರದಲ್ಲಿ ಸತತ ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಎರಡು ಬಾರಿ ಶಾಸಕರಾಗಿದ್ದರು. 1994ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದರು. ಮತ್ತೆ ಕಳೆದ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲೂ ತೋಟಗಾರಿಕಾ ಸಚಿವರಾಗಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!