Wednesday, July 6, 2022

Latest Posts

ಸಿಇಟಿ ಕೌನ್ಸೆಲಿಂಗ್‌ ಕಾಲಾವಕಾಶಕ್ಕೆ ಮನವಿ ಮಾಡಿದ ಎಐಸಿಟಿಇ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವೃತ್ತಿಪರ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲ್ಲಿಂಗ್‌ಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿದೆ.
ಜನವರಿ 15 ರವರೆಗೆ ಅವಕಾಶ ನೀಡಬೇಕು ಎಂದು ಕೋರಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕು ಎಂದಿದ್ದಾರೆ. ಉಳಿದಿರುವ ವೃತ್ತಿಪರ ಕೋರ್ಸ್‌ಗಳ ಸೀಟ್ ಆಯ್ಕೆಗೆ ಇನ್ನೊಂದು ಹಾಗೇ ಕೊನೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದರ ಜೊತೆಗೆ ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ ಕೂಡ ಎಂಜಿನಿಯರೀಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15 ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮನವಿ ಮಾಡಲಾಗಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss