Wednesday, August 17, 2022

Latest Posts

ಸಿಇಟಿ ಪರೀಕ್ಷೆ: 6 ಜನ‌ ಕೊರೋನಾ ಸೊಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

ಬಳ್ಳಾರಿ: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆಗಳು ಗುರುವಾರದಿಂದ‌ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಆರಂಭವಾಗಿದ್ದು, ಕೊರೊನಾ ಸೊಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ‌ ಪರೀಕ್ಷೆ ಬರೆಯಲು‌ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಸಿ.ಇ.ಟಿ. ಪರೀಕ್ಷೆಗೆ ಬರೆಯಲು ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ದೃಢಪಟ್ಟ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆ ಬರೆಯಲು ಬಳ್ಳಾರಿಯ ಸರ್ಕಾರಿ ಡೆಂಟಲ್ ಕಾಲೇಜನಲ್ಲಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ನಿರ್ದೇಶನದ‌ ಮೇರೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಈ ವ್ಯವಸ್ಥೆ ಮಾಡಿದೆ.
ಜಿಲ್ಲೆಯ ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ‌‌ ಇಬ್ಬರು ಕೊರೊನಾ‌ ಸೊಂಕಿತ ವಿದ್ಯಾರ್ಥಿಗಳು ಸೇರಿದಂತೆ 6 ಜನ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಜಿಲ್ಲಾಡಳಿತ ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ‌ಕರೆತಂದು ಅತ್ಯಂತ ಸುರಕ್ಷಿತವಾಗಿ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!