ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ದೃಢಪಟ್ಟಿರುವುದರಿಂದ ಅವರು ಶೀಘ್ರ ಗುಣಮುಖವಾಗಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ.
ಯಡಿಯೂರಪ್ಪ ಅವರಿಗೆ ಕೊರೋನಾ ಬಂದಿರುವುದು ತಿಳಿದು ಮನಸ್ಸಿಗೆ ದುಃಖವಾಯಿತು. ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಿಗೆ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೊರೋನಾ ಯಾರನ್ನೂ ಬಿಟ್ಟಿಲ್ಲ. ಎಲ್ಲರಿಗೂ ತೊಂದರೆ ಕೊಡುತ್ತಿದೆ. ಕೊರೋನಾ ತಗಲಿರುವ ಎಲ್ಲರೂ ಬೇಗ ಗುಣಮುಖರಾಗಲಿ ಎಂದಿದ್ದಾರೆ.