Sunday, June 26, 2022

Latest Posts

ಸಿಎಂ ನಿವಾಸದ ಮುಂದೆ ಧರಣಿ ಮಾಡುವುದಿಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟ್ವೀಟ್

ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಜೆಡಿಎಸ್ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಾಳೆ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸುವುದಾಗಿ ಘೋಷಿಸಿದ್ದನ್ನು ಹಿಂಪಡೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂ-ವಿಜ್ಞಾನ ಸಚಿವರು ಮಂಡ್ಯ ಜಿಲ್ಲೆಯ ರಾಜಕೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಜೂನ್ 29ರಂದು ಮುಖ್ಯಮಂತ್ರಿಗಳ ನಿವಾಸದ ಮುಂದೆ ಹಮ್ಮಿಕೊಳ್ಳಬೇಕಿದ್ದ ಧರಣಿಯನ್ನು ಹಿಂಪಡೆದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ರಾಜಕೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನಮ್ಮ ಬೇಡಿಕೆಗಳಿಗೆ, ಮುಖ್ಯಮಂತ್ರಿ ಯಡಿಯೂರಪ್ಪ ಭಾಗಶಃ ಒಪ್ಪಿಗೆ ನೀಡಿದ್ದಾರೆ ಎಂದು ದೇವೇಗೌಡರು ಟ್ವೀಟರ್ ನಲ್ಲಿ ತಿಳಿಸಿದ್ದಾರೆ .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss