Thursday, August 18, 2022

Latest Posts

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ , ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೂ ಕೊರೋನಾ ದೃಢಪಟ್ಟಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದು, ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ’ ಎಂದಿದ್ದಾರೆ.
ನಿಮ್ಮೆಲ್ಲರ ಹಾರೈಕೆ ಹಾಗು ಆಶೀರ್ವಾದದಿಂದ ನಾನು ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ, ನನ್ನ ಆರೋಗ್ಯದ ಜೊತೆಗೆ ನಿಮ್ಮೆಲ್ಲರ ಯೋಗಕ್ಷೇಮವು ನನಗೆ ಅಷ್ಟೇ ಮುಖ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!