ಸಿಎಎ ರದ್ದುಪಡಿಸುವಂತೆ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

0
252

ಕೇರಳ: ಪೌರತ್ವ ಕಾಯ್ದೆ (ಸಿಎಎ) ರದ್ದುಪಡಿಸುವಂತೆ ಕೇರಳ ವಿಧಾನಸಭೆ ನಿರ್ಣಯ ಮಂಡಿಸಲಾಗಿದೆ.

ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಎಸ್‍ಸಿ ಮತ್ತು ಎಸ್‍ಟಿಗಳಿಗೆ ಮೀಸಲಾತಿಯನ್ನು ಮತ್ತೊಂದು ದಶಕಗಳವರೆಗೆ ವಿಸ್ತರಿಸುವುದನ್ನು ಅಂಗೀಕರಿಸಲು ಮಂಗಳವಾರ ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ನಿರ್ಣಯ ಮಂಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರಕ್ಕೂ ಮುನ್ನ ಸಾರ್ವಜನಿಕ ಅಭಿಪ್ರಾಯ ಕೇಳಬೇಕಿತ್ತು. ಸಿಎಎ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ಪೌರತ್ವ ನೀಡುವಲ್ಲಿ ಧರ್ಮ ಆಧಾರಿತ ತಾರತಮ್ಯ ಸರಿಯಲ್ಲ ಈ ಕಾಯ್ದೆಯು ಸಂವಿಧಾನದ ಮೂಲ ಮೌಲ್ಯಗಳು ಮತ್ತು ತತ್ತ್ವಗಳಿಗೆ ವಿರುದ್ಧವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಜನರಲ್ಲಿರುವ ಆತಂಕವನ್ನು ಗಮನದಲ್ಲಿಟ್ಟುಕೊಂಡು ಸಿಎಎಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿಯನ್ನು ಇನ್ನೊಂದು ದಶಕಗಳ ಕಾಲ ಮುಂದುವರಿಸಿರುವುದಕ್ಕೆ ವಿಧಾನಸಭಾ ಸದಸ್ಯರು ಸಮ್ಮತಿ ಸೂಚಿಸಿದ್ದಾರೆ. ಆದರೆ ಸಿಎಎ ಅಂಗೀಕಾರಕ್ಕೆ ಅಲ್ಲಿನ ವಿಧಾನಸಭಾ ಸದಸ್ಯರು ಒಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here