Tuesday, June 28, 2022

Latest Posts

ಸಿಗ್ನಲ್ ಸಮಸ್ಯೆ: ಆಗಸದಲ್ಲಿಯೇ ಸುತ್ತಿದ ವಿಮಾನ

ಹುಬ್ಬಳ್ಳಿ: ಸಂಸದ ಅನಂತಕುಮಾರ ಹೆಗಡೆ ಸೇರಿದಂತೆ 49 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ನಿಲ್ದಾಣದಲ್ಲಿ ಇಳಿಯದೇ , ಗಂಟೆಗೂ ಅಧಿಕ ಕಾಲ ಆಗಸದಲ್ಲಿ ಸುತ್ತಾಡಿ ಆತಂಕ ಸೃಷ್ಟಿಸಿ ನಂತರ ಸುರಕ್ಷಿತವಾಗಿ ಲ್ಯಾಂಡ್ ಆದ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಡೆದಿದೆ . ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿದ್ದ ಈ ವಿಮಾನವು 8.55 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು . ಆದರೆ , ತೀವ್ರ ಹವಾಮಾನ ವೈಪರೀತ್ಯಗಳಿಂದಾಗಿ ಇಳಿಯಲು ಸಿಗ್ನಲ್ ದೊರೆಯದೇ ಆಗಸದಲ್ಲೇ ಸುತ್ತಾಡಿದೆ .

ಒಂದು ವೇಳೆ ಹುಬ್ಬಳ್ಳಿಯಲ್ಲಿ ವಿಮಾನ ಇಳಿಯಲು ಸಾಧ್ಯವಾಗದೇ ಹೋದಲ್ಲಿ ಗೋವಾ ಅಥವಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಸುವ ಬಗ್ಗೆ ಯೋಚನೆ ಮಾಡಲಾಗಿತ್ತು . ಆದರೆ ಸಿಗ್ನಲ್ ದೊರೆತ ಕಾರಣ 10.25 ರ ವೇಳೆ ಸುರಕ್ಷಿತವಾಗಿ ಲ್ಯಾಂಡಿಂಗ್ ಸಾಧ್ಯವಾಗಿದ್ದು , ಅನಂತಕುಮಾರ ಹೆಗಡೆ ಸೇರಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss