ತುಮಕೂರು: ಸಿದ್ದಗಂಗಾ ಮಠಕ್ಕೆ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ರವರು ಇಂದು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳ ಗದ್ದಿಗೆಯ ದರ್ಶನ ಪಡೆದರು .
ನಂತರ ಕೆಳಭಾಗದಲ್ಲಿರುವ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಧ್ಯಾನಾಸಕ್ತರಾದರು ಮೂರು ನಿಮಿಷಗಳ ಕಾಲ ಧ್ಯಾನ ಮಾಡಿದ ಉಪ ಮುಖ್ಯಮಂತ್ರಿಗಳು ನಂತರ ಹಳೆಮಠದ ಆವರಣಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳು ಕೂರುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪುತ್ತಳಿ ಯನ್ನು ದರ್ಶನ ಮಾಡಿದರು.ನಂತರ ಸಿದ್ದಗಂಗಾ ಕ್ಷೇತ್ರದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದವನ್ನು ಪಡೆದರು.