spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿದ್ದರಾಮಯ್ಯರು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕೊಡಿಸಲಿ: ಸಚಿವ ಕೆ.ಎಸ್.ಈಶ್ವರಪ್ಪ

- Advertisement -Nitte

 ಹೊಸ ದಿಗಂತ ವರದಿ, ದಾವಣಗೆರೆ:

ಸಿದ್ದರಾಮಯ್ಯ ಏನಾದರೂ ತೀರ್ಮಾನ ಮಾಡಿ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕೊಡಿಸಲಿ. ನಾನೇನು ಬೇಡ ಅನ್ನಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂಗೆ ಟಾಂಗ್ ನೀಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರುಬರಿಗೆ ಎಸ್ಟಿ ಮೀಸಲಾತಿ ಸಿಗಬೇಕೆಂದು ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಇಂದು ಹೋರಾಟ ಆರಂಭವಾಗಿದೆ. ಸಭೆ, ಸಮಾರಂಭಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿವೆ. ಸಿದ್ದರಾಮಯ್ಯನವರನ್ನು ಸಹ ಹೋರಾಟಕ್ಕೆ ಕರೆಯಲಾಗಿದೆ. ಅವರು ಹೋರಾಟಕ್ಕೆ ಬಂದು ಏನಾದರೂ ತೀರ್ಮಾನ ಮಾಡಿ, ಸಮಾಜಕ್ಕೆ ಮೀಸಲಾತಿ ಕೊಡಿಸಲಿ ಎಂದರು.
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕೊಟ್ಟರೆ ಬೇಡ ಅಂತಾರಾ? ನಾವು ಸಮಾಧಾನವಾಗಿ ಹೋರಾಟ ನಡೆಸುತ್ತಿದ್ದೇವೆ. ಸಿದ್ದರಾಮಯ್ಯನವರೂ ಅವರ ಪ್ರಯತ್ನ ಮಾಡಲಿ. ನಾವೆಲ್ಲರೂ ಗುರುಗಳ ಜೊತೆಗೆ ಹೋರಾಟ ಮಾಡಲು ಹೊರಟಿದ್ದೇವೆ. ಅವರೂ ಬಂದರೆ ಸಂತೋಷ ಎಂದು ಈಶ್ವರಪ್ಪ ನುಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss