spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿದ್ದರಾಮಯ್ಯ ಅವರು ಕೂಡಲೇ ರಾಜ್ಯದ ಜನರಲ್ಲಿ ಕ್ಷಮೆ ಕೇಳಲಿ: ಈಶ್ವರಪ್ಪ ಆಗ್ರಹ

- Advertisement -Nitte

ಮೈಸೂರು: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನವನ್ನು ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಲು ಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಮ್ ಇಲ್ಲ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಶುಕ್ರವಾರ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಧಮ್ ಇಲ್ಲ. ಅವರಿಗೆ ಧಮ್ ಇದ್ದಿದ್ದರೆ ಏಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋತರು. ಲೋಕಸಭೆಯಲ್ಲಿ ೨೫ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಮೂಲಕ ಬಿಜೆಪಿಯ ಧಮ್ ಏನೆಂದು ತೋರಿಸಿಕೊಟ್ಟಿದೆ ಎಂದು ತಿರುಗೇಟು ನೀಡಿದರು.
ಜಾತಿ, ಜಾತಿ ಎನ್ನುತ್ತಾ ಸ್ವಜಾತಿಯವರನ್ನು ಬಳಸಿಕೊಂಡು, ಅವರಿಗೆ ಮೋಸ ಮಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಮಾಜಿ ಸಂಸದ ಹೆಚ್.ವಿಶ್ವನಾಥ್‌ಗೆ, ಪಕ್ಷದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನ ಕಲ್ಪಿಸುವ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss