Sunday, October 2, 2022

Latest Posts

ಸಿದ್ದರಾಮಯ್ಯ ನಡೆಗೆ ಕಾಂಗ್ರೆಸ್ ಪಕ್ಷದಲ್ಲೇ ವಿರೋಧ: ನಳಿನ್ ಕುಮಾರ್ ಕಟೀಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಣ್ಣನವರು ಹಿಂದೂ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಸಾವರ್ಕರ್ ಅವರನ್ನು ಅಪಮಾನಿಸಿದ್ದಾರೆ. ಇವೆರಡನ್ನು ಕಾಂಗ್ರೆಸ್‍ನಲ್ಲೇ ವಿರೋಧಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಗಮನಿಸಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ಅದರ ಪರಿಣಾಮವಾಗಿ ಮೊಟ್ಟೆ ಎಸೆದುದಾಗಿ ಕಾಂಗ್ರೆಸ್ ಕಾರ್ಯಕರ್ತ ಉಲ್ಲೇಖ ಮಾಡಿದ್ದಾನೆ ಎಂದ ಅವರು, ಸಿದ್ದರಾಮಣ್ಣ ಈಗ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮಡಿಕೇರಿಗೆ ಪಾದಯಾತ್ರೆ ಮಾಡಲಿದ್ದಾರಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಜೋಡೋ ಮಾಡ್ತಾರಾ? ಚೋಡೋ ಮಾಡ್ತಾರಾ? ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ಹಿಂದಿನಿಂದ ಡಿ.ಕೆ.ಶಿ ಮೊಟ್ಟೆ ಎಸೆಯುವಂತೆ ಮಾಡಿದ್ದಾರಾ ಎಂಬುದೂ ತನಿಖೆಗೆ ಒಳಪಡಬೇಕಿದೆ ಎಂದು ನುಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!