ಬೆಳಗಾವಿ : ಸಿದ್ದರಾಮಯ್ಯ ಮಾಜಿ ಸಿಎಂ ಆಗಿ ಗೌರವವಾಗಿ ನಡೆದುಕೊಳ್ಳಬೇಕು. ಬಾಯಿಗೆ ಬಂದತೆ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು ಮಂಗಳವಾರ ಇತ್ತಿಚೆಗೆ ನಿಧನರಾದ ಸಚಿವ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡುವ ಮೊದಲು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸಿಎಂ ಇದ್ದಾಗ ಮೂರು ಸಾವಿರ ಜನ ರೈತರು ಆತ್ಮಹತ್ಯೆ ಮಾಡಿಕೊಂಡರು.
ಸಿದ್ದರಾಮಯ್ಯ ಯೋಗ್ಯತೆ ಎನಿದೆ ರೈತರು ಆತ್ಮಹತ್ಯೆ ಮಾಡಿಕೊಂಡರೇ ಮನೆಗೆ ಹೋಗಲಿಲ್ಲ ಅಂತವರು ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಹೇಳುವುದಕ್ಕೆ ನೈತಿಕ ಹಕ್ಕಿಲ್ಲ ಎಂದರು.
ನಮ್ಮ ರಾಜ್ಯದಲ್ಲಿ ವೀರಪ್ಪನ್ ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್ ನವರು ಆಡಳಿತ ನಡೆಸಿದವರು. ಟಿಪ್ಪು ಜಯಂತಿ ಹೆಸರಲ್ಲಿ ಗಲಭೆ ಸೃಷ್ಟಿಸಿ, ಲಿಂಗಾಯತ ವೀರಶೈವ ಅಂತಾ ಸಮಾಜ ಒಡೆದರು.
ಅಧಿಕಾರವನ್ನ ಉಳಿಸಬೇಕು ಅಂತಾ ಬ್ರಿಟಿಷರಿಗಿಂತ ಕಟ್ಟ ಕಡೆಯದಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕುಟುಕಿದರು.
ಇಂತಹ ಕೆಟ್ಟ ಸಿಎಂ ಬೇಡಾ ಅಂತಾ ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲಿ ಮನೆಗೆ ಕಳಸಿದ್ದಾರೆ.
ಎಲ್ಲೇಲ್ಲೋ ನಿಂತು ಗೆಲ್ಲುವ ಪರಿಸ್ಥಿತಿ ಒಬ್ಬ ಮುಖ್ಯಮಂತ್ರಿಗೆ ಬಂದಿದೆ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ.
ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿದ್ದರು.