ನವದೆಹಲಿ: ಸಿಬಿಎಸ್ಇ 12 ನೇ ತರಗತಿಯ ಪರೀಕ್ಷೆಗಳ ಫಲಿತಾಂಶ ಅ.೧೦ರಂದು ಪ್ರಕಟವಾಗಲಿದೆ.
ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಅ.10ರಂದು ಪರೀಕ್ಷೆ ಫಲಿತಾಂಶ ಪ್ರಕಟಿಸುವುದಾಗಿ ಸಿಬಿಎಸ್ಇ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಅ.೩೧ರಿಂದ ಪದವಿ ಪೂರ್ವ ಕೋರ್ಸ್ಗಳ ಶೈಕ್ಷಣಿಕ ಕ್ಯಾಲೆಂಡರ್ ಆರಂಭಗೊಳ್ಳಲಿದ್ದು,ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಮಾಡಲಾಗಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಈ ಹಿಂದೆಯೇ ಪೀಠ ಹೇಳಿತ್ತು.