Wednesday, August 10, 2022

Latest Posts

ಸಿಬಿಐಯಿಂದ ನಿಷ್ಪಕ್ಷಪಾತ ತನಿಖೆ: ಕೆ.ಎಸ್ ಈಶ್ವರಪ್ಪ ವಿಶ್ವಾಸ

ಹೊಸದಿಗಂತ ವರದಿ ಮಂಗಳೂರು:

ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದಿದ್ದು, ಸಿಬಿಐ ಕ್ರಮವನ್ನು ಸ್ವಾಗತಿಸುವುದಾಗಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ ಎಂದರು.

ಸಿಬಿಐ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿಯಾಗುತ್ತದೆ ಎಂದವರು ಹೇಳಿದರು.

ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆಯಾಗುತ್ತಿತ್ತು. ಅದೇ ಸರ್ಕಾರ ಯಾವಾಗಲೂ ಇರುತ್ತೆ ಅಂತ ಹೇಳಲು ಆಗಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.

ಯಾವುದೇ ಕಾರಣಕ್ಕೂ ವಿನಯ್ ಕುಲಕರ್ಣಿ ಯನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss