Thursday, August 11, 2022

Latest Posts

ಸಿಸಿಬಿ ವಿಚಾರಣೆ ಎದುರಿಸಲು ಮಂಗಳೂರಿಗೆ ಆಗಮಿಸಿದ ಆಂಕರ್ ಅನುಶ್ರೀ!

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಆಂಕರ್ ಅನುಶ್ರೀಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದಾರೆ. ಆದರೆ ವಿಚಾರಣೆಗೆ ಹಾಜರಾಗಿಲ್ಲ.
ಬೆಳಗ್ಗಿನಿಂದಲೇ ಮಂಗಳೂರು ಸಿಸಿಬಿ ಪೊಲೀಸರು ಅನುಶ್ರೀಯವರನ್ನು ವಿಚಾರಣೆ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪಾಂಡೇಶ್ವರದ ನಾರ್ಕೋಟಿಕ್ ಆಂಡ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಿಚಾರಣೆಯ ಸಿದ್ಧತೆ ನಡೆಸಿತ್ತು. ಆದರೆ ಅನುಶ್ರೀ ವಿಚಾರಣೆಗೆ ಆಗಮಿಸಿಲ್ಲ. ಮಂಗಳೂರಿನ ತನ್ನ ಮನೆಯಲ್ಲಿ ತಂಗಿದ್ದಾರೆ ಎನ್ನಲಾಗಿದ್ದು, ಅವರು ಶನಿವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss