Sunday, August 14, 2022

Latest Posts

ಸಿ.ಎಂ.ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ: ಶಾಸಕ ಗಾಲಿ ಸೋಮಶೇಖರ ರೆಡ್ಡಿ

ಬಳ್ಳಾರಿ: ನಾಡಿನ ದೊರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರದಲ್ಲೇ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುವೆ ಎಂದು ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಹೇಳಿದರು. ನಗರದ ಹೊರವಲಯದ ಅಲ್ಲಿಪೂರ ಕೆರೆಯ ಎಚ್. ಎಲ್.ಕಾಲುವೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೊಂಕು ತಗುಲಿದೆ ಎನ್ನುವ ಸುದ್ದಿ ಭಾನುವಾರ ತಿಳಿದಿದ್ದು, ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದರು. ಈ ನಾಡಿಗೆ ಅವರ ಸೇವೆ ಅತ್ಯಗತ್ಯವಾಗಿದೆ ಎಂದರು.
ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಅ.5 ರಂದು ಚಾಲನೆ ದೊರೆಯಲಿದೆ. ಕಳೆದ ಸುಮಾರು ವರ್ಷಗಳಿಂದ ದೇಶದ ಜನರ ಬಯಕೆಯೂ ಇದೇ ಆಗಿತ್ತು. ಈಗ ಕಾಲ ಕೂಡಿ ಬಂದಿದೆ. ದೇಶದ ಪ್ರತಿಯೋಬ್ಬ ಹಿಂದೂಗಳ ಬೇಡಿಕೆಯೂ ಇದೇ ಆಗಿತ್ತು. ರಾಮಮಂದಿರ ನಿರ್ಮಾಣವಾಗುತ್ತಿರುವುದು ಸಂತಸ ಮೂಡಿಸಿದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ಶ್ರೀರಾಮ ನೆಲೆಸಿದ್ದರು ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆ ಈ ಪ್ರಸಿದ್ಧ ಕ್ಷೇತ್ರದಿಂದ ರಾಮಮಂದಿರ ನಿರ್ಮಾಣಕ್ಕೆ ಒಂದು‌ ಕಲ್ಲನ್ನು ತೆಗೆದುಕೊಂಡು ಹೋಗಲಾಗಿದೆ. ಶ್ರೀರಾಮ ಮಂದಿರದಲ್ಲೂ ಇಲ್ಲಿನ ಅಂಜನಾದ್ರಿ ಬೆಟ್ಟದ ಕಲ್ಲನ್ನು ನೋಡಬಹುದಾಗಿದೆ. ದೇಶದ ಪ್ರತಿಯೋಬ್ಬ ಹಿಂದೂಗಳು ಆ.5 ರಂದು ಶ್ರೀರಾಮನ ನಾಮ ಸ್ಮರಣೆ ಮಾಡುವ ಮೂಲಕ ಭಕ್ತಿ ಸಮರ್ಪಿಸಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss