Monday, July 4, 2022

Latest Posts

ಸಿ.ಪಿ.ಯೋಗೇಶ್ವರ್‌ಗೆ ಮಂತ್ರಿ ಸ್ಥಾನ ನೀಡಲು ಅವಸರ ಯಾಕೆ: ಹೆಚ್.ವಿಶ್ವನಾಥ್ ಆಕ್ಷೇಪ

ಹೊಸದಿಗಂತ ವರದಿ, ಮೈಸೂರು:

ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬುಧವಾರ ಮೈಸೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಬಹಳಷ್ಟು ಹಿರಿಯರಿದ್ದಾರೆ. ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸದರೆ, ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅವಸರ ಮಾಡುತ್ತಿರುವುದೇಕೆ, ಯೋಗೇಶ್ವರ್ ಏನಾದರೂ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರವನ್ನು ಕೆಡವಲು ಪ್ರಯತ್ನ ಮಾಡಿದ್ದರಾ, ಶಾಸಕ ಸ್ಥಾನಕ್ಕೇನು ರಾಜೀನಾಮೆ ನೀಡಿದ್ದರಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪಾತ್ರ ಏನೂ ಇಲ್ಲ, ಹೀಗಿದ್ದರೂ ಅವರಿಗೆ ಸಚಿವ ಸ್ಥಾನ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ನಾವು ಯಾರನ್ನು ವಿರೋಧಿಸಿ, ಸಮಿಶ್ರ ಸರ್ಕಾರವನ್ನು ಕೆಡವಿ ಬಂದಿದ್ದೆವೊ, ಅವರ ಸಖ್ಯವನ್ನೇ ಯಡಿಯೂರಪ್ಪ ಮಾಡುತ್ತಿದ್ದಾರೆ.ಅವರನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss