ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರ ಕೆದಕಲ್ ಬಳಿ ಕಂಟೈನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ
ಮೃತನನ್ನು ಮೈಸೂರಿನ ವಿಶ್ವೇಶ್ವರ ನಗರ ನಿವಾಸಿ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಕೆದಕಲ್ ಬಳಿಯ ಭದ್ರಕಾಳಿ ದೇವಾಲಯದ ತಿರುವಿನಲ್ಲಿ ಮುಂಜಾನೆ 7 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ (ಕೆಎ19 ಎಎ4870) ಅನಿಲ್ಕುಮಾರ್ ಚಾಲಿಸುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಈ ಸಂದರ್ಭ ಆಯತಪ್ಪಿ ಕೆಳಕ್ಕುರುಳಿದ ಅನಿಲ್ಕುಮಾರ್ ಮೇಲೆ ಲಾರಿಯ ಹಿಂಬದಿ ಚಕ್ರ ಹರಿದಿದೆ.
ಸ್ಥಳೀಯರು ಕೂಡಲೇ ಅಂಬ್ಯುಲೆನ್ಸ್ ಮೂಲಕ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದರಾದರೂ ಆತನ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಬಿ.ತಿಮ್ಮಪ್ಪ ಹಾಗೂ ಸಿಬ್ಬಂದಿಗಳು ತೆರಳಿ ಲಾರಿ ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.