Tuesday, July 5, 2022

Latest Posts

ಸುಂಟಿಕೊಪ್ಪ| ಚಾಲಕನ ನಿಯಂತ್ರಣ ತಪ್ಪಿ ಫ್ಯಾನ್ಸಿ ಅಂಗಡಿಗೆ ನುಗ್ಗಿದ ವ್ಯಾನ್!!

ಸುಂಟಿಕೊಪ್ಪ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ವ್ಯಾನ್ ಮೈಗಲ್ಲಿಗೆ ಡಿಕ್ಕಿ ಹೊಡೆದು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ ಕಡೆಯಿಂದ ಆಗಮಿಸಿ ಕನ್ನಡ ವೃತ್ತದ ಮೂಲಕ ಮಾದಾಪುರ ರಸ್ತೆ ಕಡೆಗೆ ಚಲಿಸುತ್ತಿದ್ದ ಮಾರುತಿ ಓಮ್ನಿ (ಕೆಎ12 0055)ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿ ಬದಿಯ ಮೈಲಿಗಲ್ಲಿಗೆ ಡಿಕ್ಕಿ ಹೊಡೆದಿದೆ. ಆದರೂ ನಿಯಂತ್ರಣಕ್ಕೆ ಬಾರದ ವಾಹನ ಫ್ಯಾನ್ಸಿ ಅಂಗಡಿ ಮುಂಭಾಗದಲ್ಲಿ ನಿಂತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಫ್ಯಾನ್ಸಿ ಅಂಗಡಿಯ ಮೆಟ್ಟಿಲು ಮೇಲೆ ನಿಂತಿತು. ಅದೃಷ್ಟವಶಾತ್ ಈ ಸಂದರ್ಭದಲ್ಲಿ ಅಂಗಡಿಯ ಮುಂಭಾಗದಲ್ಲಿ ಯಾರೂ ಇಲ್ಲದಿದ್ದುರಿಂದ ಪ್ರಾಣ ಹಾನಿ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಮಾತ್ರ ಸಣ್ಣ ಪ್ರಮಾಣದಲ್ಲಿ ಜಖಂಗೊಂಡವು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss