ಸುಕೇಶ್‌ಗೆ ಯಾವುದೇ ಸಹಾಯ ಮಾಡಿಲ್ಲ: ದೆಹಲಿ ಹೈಕೋರ್ಟ್ ಮೊರೆ ಹೋದ ನಟಿ ಜಾಕ್ವೆಲಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Monet Laundering case) ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಜೊತೆ ಹೆಸರು ಕೇಳಿಬಂದಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಡಿ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekar) ಒಳಗೊಂಡ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ಮತ್ತು ಇಡಿ ಸಲ್ಲಿಸಿದ ಪೂರಕ ಆರೋಪಪಟ್ಟಿಯಿಂದ ತನ್ನ ಹೆಸರನ್ನ ಕೈಬಿಡುವಂತೆ ಜಾಕ್ವೆಲಿನ್ ಮನವಿ ಮಾಡಿದ್ದಾರೆ.

ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಸಹ- ಆರೋಪಿಯಾಗಿದ್ದಾರೆ. ಈ ಮೊದಲು ದೆಹಲಿ ಪೊಲೀಸರು ದಾಖಲಿಸಿದ್ದ ಈ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು.‌
ಆರೋಪಿ ಸುಕೇಶ್, ರೆಲಿಗೇರ್ ಎಂಟರ್‌ಪ್ರೈಸಸ್ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ ಹಣ ಸುಲಿಗೆ ಮಾಡುತ್ತಿದ್ದನು ಎಂದು ಆರೋಪಿಸಿ, ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ವಂಚನೆ ಪ್ರಕರಣ ದಾಖಲಿಸಿತ್ತು. ಆನಂತರ ಈ ಪ್ರಕರಣ ಇಡಿ ಅಂಗಳ ತಲುಪಿತು.

ಆರೋಪಿ ಸುಕೇಶ್‌ಗೆ ತಾನು ಯಾವುದೇ ರೀತಿಯಲ್ಲಿ ಸಹಾಯ ಮಾಡಿಲ್ಲ, ಅಷ್ಟಕ್ಕೂ ಈ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!