Tuesday, June 28, 2022

Latest Posts

ಸುಖಾಂತ್ಯಗೊಂಡ ಉಜಿರೆಯ ಬಾಲಕನ ಕಿಡ್ನ್ಯಾಪ್ ಪ್ರಕರಣ: ಅಪಹರಣಾಕಾರರ ಬಂಧನ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಪಹರಣಕ್ಕೆ ಒಳಗಾಗಿದ್ದ ಉಜಿರೆಯ 8 ವರ್ಷದ ಬಾಲಕನನ್ನು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಹಳ್ಳಿಯಲ್ಲಿ ಪತ್ತೆ ಮಾಡಲಾಗಿದೆ.
ಆರು ಮಂದಿ ಅಪಹರಣಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣವಾದ 48  ಗಂಟೆಗಳಲ್ಲಿ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.
ಅಪಹರಣಾಕಾರರು ಮಂಜುನಾಥ್ ಎನ್ನುವವರ ಮನೆಯಲ್ಲಿ ಬಾಲಕನನ್ನು ಇರಿಸಿದ್ದರು. ಕೋಲಾರ ಜಿಲ್ಲಾ ಪೊಲೀಸರ ನೆರವಿನಿಂದ ಕಾರ್ಯಾಚರಣೆ ನಡೆದಿದೆ. ಕೋಮಲ್, ಗಂಗಾಧರ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಕೋಲಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.  ಉಜಿರೆಯ ರಥಬೀದಿಯ ಬಿಜೋಯ್ ಅವರ ಮಗ ಅನುಭವ್ ಮನೆಯಂಗಳದಲ್ಲಿ ಆಟ ಆಡುತ್ತಿದ್ದಾಗ ಆತನನ್ನು ಅಪಹರಿಸಲಾಗಿದ್ದು, ಇದು ಎಲ್ಲರಲ್ಲೂ ಆತಂಕ ಸೃಷ್ಟಿಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss