ಐಟಂ ಹಾಡುಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತೆ ಕನ್ನಡದಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬಾಲಿವುಡ್ ಮಾತ್ರವಲ್ಲದೆ ಬೇರೆ ಬೇರೆ ‘ಭಾಷೆಯಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿರುವ ಸನ್ನಿ ಲಿಯೋನ್ ಕನ್ನಡ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಡಿಕೆ ಮತ್ತು ಲವ್ ಯು ಆಲಿಯಾ ಸಿನಿಮಾಗಳಲ್ಲಿ ಜಬರ್ದಸ್ತ್ ಹೆಜ್ಜೆ ಹಾಕುವ ಮೂಲಕ ಸನ್ನಿ ಕನ್ನಡ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈಗ ಮತ್ತೆ ಕನ್ನಡಕ್ಕೆ ಎಂಟ್ರಿ ಕೊಡ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಈ ಬಾರಿ ಕಿಚ್ಚ ಸುದೀಪ ಜೊತೆ ಸನ್ನಿ ಹೆಜ್ಜೆ ಹಾಕಲಿದ್ದಾರೆ ಎಂಬ ಸುದ್ದಿ ಬಂದಿದೆ. ಸುದೀಪ್ ಅಭಿನಯದ ಕೋಟಿಗೊಬ್ಬ-೩ ಸಿನಿಮಾದ ವಿಶೇಷ ಹಾಡಿನಲ್ಲಿ ಸನ್ನಿ ಲಿಯೋನ್ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಈ ಬಗ್ಗೆ ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಪ್ರತಿಕ್ರಿಯೆ ನೀಡಿದ್ದಾರೆ. ಇದರ ಬಗ್ಗೆ ಏನು ವಿಷಯನೇ ಗೊತ್ತಿಲ್ಲ. ಈ ವಿಷಯ ದ ಬಗ್ಗೆ ಖಚಿತವಾದ ಮೇಲೆ ಹೇಳುತ್ತೀವಿ ಎಂದಿದ್ದಾರೆ.
ಒಂದುವೇಳೆ ಈ ಸುದ್ದಿ ನಿಜವೇ ಆದರೆ ಕನ್ನಡ ಚಿತ್ರ ಪ್ರೇಕ್ಷಕರಿಗೆ ದೊಡ್ಡ ಹಬ್ಬವಾಗಲಿದೆ. ಕಿಚ್ಚ ಮತ್ತು ಸನ್ನಿ ಲಿಯೋನ್ ಡ್ಯಾನ್ಸ್ ನೋಡಲು ಅಭಿಮಾನಿಗಳು ಈಗಾಗಲೆ ಕಾತರರಾಗಿದ್ದಾರೆ.