ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸುಪ್ರೀಂಕೋರ್ಟ್ನ ಇಬ್ಬರು ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿರುವ ಭಯಾನಕ ಘಟನೆ ಭಾನುವಾರ ಅಫ್ಘಾನಿಸ್ತಾನದ ಕಾಬೂಲ್ನಲ್ಲಿ ನಡೆದಿದೆ.
ಸುಪ್ರೀಂಕೋರ್ಟ್ ವಕ್ತಾರ ಅಹಮದ್ ಫಹೀಮ್ ಖವೀಮ್ ಈ ಬಗ್ಗೆ ಮಾಹಿತಿ ನೀಡಿದ್ದು, ನ್ಯಾಯಾಲಯದ ಕಾರಿನಲ್ಲಿ ಮಹಿಳಾ ನ್ಯಾಯಮೂರ್ತಿಗಳು ಕಚೇರಿಗೆ ಬರುತ್ತಿದ್ದಾಗ ಈ ದಾಳಿ ನಡೆದಿದೆ.ದಾಳಿಯಲ್ಲಿ ಇಬ್ಬರು ಮಹಿಳಾ ನ್ಯಾಯಮೂರ್ತಿಗಳೂ ಮೃತಪಟ್ಟಿದ್ದಾರೆ. ಕಾರು ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ಇಲ್ಲಿಯ ಸುಪ್ರೀಂಕೋರ್ಟ್ನಲ್ಲಿ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ಉನ್ನತ ಹುದ್ದೆಗಳಿಗೆ 200ಕ್ಕೂ ಹೆಚ್ಚು ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ನ್ಯಾಯಮೂರ್ತಿಗಳನ್ನೇ ಏಕೆ ಟಾರ್ಗೆಟ್ ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆದಿದೆ.
ಅಲ್ಲಿನ ಸರ್ಕಾರ ಮತ್ತು ತಾಲಿಬಾನ್ ನಡುವೆ ಶಾಂತಿ ಮಾತುಕತೆ ನಡೆಯುತ್ತಿದೆ. ಆದರೂ ಕೆಲವು ತಿಂಗಳಿನಿಂದ ಅಫ್ಘಾನಿಸ್ತಾನದಲ್ಲಿ ಹಿಂಸಾತ್ಮಕ ದಾಳಿಗಳು ಹೆಚ್ಚಾಗಿವೆ.