Wednesday, August 17, 2022

Latest Posts

ಸುರಕ್ಷಿತವಾಗಿ ಪಿಯು ಇಂಗ್ಲಿಷ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರಕ್ಕೆ ಡಿಸಿ ಕ್ಯಾ.ರಾಜೇಂದ್ರ ಭೇಟಿ, ಪರಿಶೀಲನೆ

ಬಾಗಲಕೋಟೆ: ಲಾಕ್‍ಡೌನ್ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಷಿ ಇಂಗ್ಲೀಷ ವಿಷಯ ಪರೀಕ್ಷೆಯನ್ನು ಜೂನ್ 8 ಗುರುವಾರದಂದು ನಡೆದಿದ್ದು, ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ನವನಗರದ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜ ಮತ್ತು ಬಸವೇಶ್ವರ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು. ಕೋವಿಡ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಿದ ಸುರಕ್ಷತೆಗೆ, ಮಾಸ್ಕ ಧರಿಸಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡ ಬಗ್ಗೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಮುಖಕ್ಕೆ ಮಾಸ್ಕ್, ಕೈಗಳಿಗೆ ಗ್ಲೌಸ್ ಧರಿಸಿದನ್ನು ಪರಿಶೀಲಿಸಿದರು. ಸುರಕ್ಷಿತವಾಗಿ ಪರೀಕ್ಷೆ ನಡೆದಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ 21,109 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 20,413 ವಿದ್ಯಾರ್ಥಿಗಳು ಹಾಜರಾಗಿ 696 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಇದರಲ್ಲಿ ಬೇರೆ ಜಿಲ್ಲೆಗಳಿಂದ 734 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಈ ಪೈಕಿ 732 ವಿದ್ಯಾರ್ಥಿಗಳು ಹಾಜರಾಗಿ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ. ಈ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವದಿಲ್ಲ. ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆದಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಖುಷಿಯಿಂದ ಆಗಮಿಸಿದ ವಿದ್ಯಾರ್ಥಿಗಳು 
ಕೋವಿಡ್ ಹಿನ್ನಲೆಯಲ್ಲಿ ಬಾಕಿ ಉಳಿದ ಇಂಗ್ಲೀಷ ವಿಷಯ ಪರೀಕ್ಷೆಗೆ ಕಳೆದ ಮೂರು ತಿಂಗಳುಗಳ ಕಾಲ ಅಬ್ಯಾಸ ಮಾಡಲು ಕಾಲಾವಕಾಶ ದೊರೆಕಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಖುಷಿಯಿಂದ ಪರೀಕ್ಷಾ ಪ್ರಾರಂಭದ ಒಂದು ಮುಕ್ಕಾಲು ಗಂಟೆ ಮುಂಚೆನೆ ಪರೀಕ್ಷಾ ಕೇಂದ್ರಕ್ಕೆ ನಿರ್ಭಿತಿಯಿಂದ ಆಗಮಿಸುತ್ತಿರುವು, ಸಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾ ಕೊಠಡಿಗೆ ಹೋರುತ್ತಿರುವ ದೃಶ್ಯ ಕಂಡುಬಂದಿತು.
ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ 
ದ್ವಿತೀಯ ಪಿಯುಸಿ ಇಂಗ್ಲೀಷ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ, ಮಾಸ್ಕ್ ಧರಿಸಿದ್ದನ್ನು ಖಾತ್ರಿ ಪಡಿಸಿಕೊಳ್ಳಲಾಯಿತು. ಪರೀಕ್ಷೆ ಬರೆಯುವ ಕೊಠಡಿಗಳಲ್ಲಿ ಡೆಕ್ಸ್‍ಗಳ ನಡುವೆ ಅಂತರ ಕಾಯ್ದುಕೊಳ್ಳಲಾಗಿತ್ತು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಸ್ಯಾನಿಟೈಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಯಿತು. ಆರೋಗ್ಯ ತಪಾಸಣೆ ಮಾಡುವ ಕಾರಣ ವಿದ್ಯಾರ್ಥಿಗಳು ಒಂದು ಮುಕ್ಕಾಲು ಗಂಟೆ ಮುಂಚಿತವಾಗಿ ಬರಲು ತಿಳಿಸಲಾಗಿತ್ತು.
ಜಿಲ್ಲೆಯಾದ್ಯಂತ 280 ಬಸ್ ವ್ಯವಸ್ಥೆ 
ಜಿಲ್ಲೆಯಾದ್ಯಂತ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ 280 ಬಸ್‍ಗಳನ್ನು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ಹತ್ತಿರವಿದ್ದವರು ಕಾಲು ನಡಿಗೆಯಿಂದ, ಕೆಲವರು ಸ್ವಂತ ವಾಹನಗಳಲ್ಲಿ ಹಾಗೂ ಪಾಲಕರ ಜೊತೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದು ಕಂಡುಬಂದಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!