Saturday, July 2, 2022

Latest Posts

ಸುರಕ್ಷಿತ ದಸರಾ: ಕ್ರಿಯಾ ಯೋಜನೆ ತಯಾರಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವ ಶ್ರೀರಾಮುಲು ಸೂಚನೆ

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಾಡಹಬ್ಬ ದಸರಾ ಉತ್ಸವವನ್ನು ಆಚರಿಸುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತ ಕ್ರಮಗಳ ಕುರಿತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಿಶ್ವವಿಖ್ಯಾತ ನಾಡಹಬ್ಬ ದಸರಾ ಉತ್ಸವವನ್ನು ನಡೆಸುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯ ಮಂತ್ರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಈ ಸೂಚನೆಯಂತೆ ದಸರಾವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೊನ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರು ಸರ್ಕಾರದ ಮೇಲೆ ಜವಾಬ್ಧಾರಿ ಹಾಕಿ ಸುಮ್ಮನಿರಬಾರದು. ಸರ್ಕಾರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿರುತ್ತದೆ. ಸಾರ್ವಜನಿಕ ಅಂತರ ಕಾಯ್ದುಕೊಂಡು. ಮಾಸ್ಕ್ ಧರಿಸಿ ಸುರಕ್ಷತೆಯಿಂದ ಸರಳ ದಸರಾ ಮಹೋತ್ಸವವನ್ನು ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಮೈಸೂರು ನಗರದಲ್ಲಿ ಕೋವಿಡ್‍ಗೆ ಸಂಬಂಧಿಸಿದಂತೆ ಹಾಸಿಗೆ, ವೆಂಟೀಲೇಟರ್, ಕರೋನ ಸೋಂಕಿತರ ಸಂಖ್ಯೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ವೆಂಕಟೇಶ್ರ ರಿಂದ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಹಾಜರಿದ್ದ ಜನಪ್ರತಿನಿಧಿಗಳು ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಸರಾ ಆಚರಣೆಯನ್ನು ಅತ್ಯಂತ ಸರಳವಾಗಿ ಹಾಗೂ ಸಂಪ್ರದಾಯಕ್ಕೆ ಸೀಮಿತಗೊಳಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್. ವಿಶ್ವನಾಥ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ ಇನ್ನಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss