spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸುರತ್ಕಲ್ ಟೋಲ್ ಗೇಟ್ ರದ್ದು: ಶೀಘ್ರವೇ ವಿಶೇಷ ಸಭೆ ಕರೆಯಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ

- Advertisement -Nitte

ಹೊಸದಿಗಂತ ವರದಿ, ಮಂಗಳೂರು:

ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವ ಬಗ್ಗೆ ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆದೇಶಿಸಿದ್ದಾರೆ.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಗುರುವಾರ ರಾಜ್ಯದ ಸಂಸದರ ಸಭೆ ಸಚಿವ ನಿತಿನ್ ಗಡ್ಕರಿಯವರ ನಿವಾಸದಲ್ಲಿ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ರಾಜ್ಯದ ಹಲವಾರು ವಿಷಯಗಳನ್ನು ಚರ್ಚಿಸಲಾಗಿದ್ದು, ಸುರತ್ಕಲ್ ಟೋಲ್‌ಗೇಟ್ ರದ್ದು ವಿಚಾರದಲ್ಲಿ ಸಚಿವರು ಈ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರು ವಿವಿಧ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವುದು, ರಾಷ್ಟ್ರೀಯ ಹೆದ್ದಾರಿ 169 ಸಣ್ಣೂರು – ಬಿಕರ್ನಕಟ್ಟೆ ರಸ್ತೆ ಚತುಷ್ಪಥ ಕಾಮಗಾರಿ ಟೆಂಟರ್ ಅಂತಿಮಗೊಳಿಸುವ ಬಗ್ಗೆ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡು – ಅಡ್ಡಹೊಳೆವರೆಗಿನ ರಸ್ತೆ ಚತುಷ್ಪತ ಕಾಮಗಾರಿ ಟೆಂಡರ್ ಅಂತಿಮಗೊಳಿಸುವ ಬಗ್ಗೆ, ದ್ವಿಪಥ ರಸ್ತೆಯಾಗಿರುವ ಮುಲ್ಕಿ-ಕಟೀಲು-ಕೈಕಂಬ-ಪೊಳಲಿ-ಬಿಸಿ ರೋಡು-ಪಾಣೆಮಂಗಳೂರು ಮೂಲಕ ತೊಕ್ಕೊಟ್ಟು ಸಂಪರ್ಕಿಸುವ ಮಂಗಳೂರು ನಗರ ಹೊರವರ್ತುಲ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸವ ಬಗ್ಗೆ, ಮಂಗಳೂರು-ಬೆಂಗಳೂರು ಸಂಪರ್ಕಿಸಲು ಪರ್ಯಾಯ ರಸ್ತೆಯಾಗಿರುವ ಮಾಣಿ-ಮೈಸೂರು ಹೆದ್ದಾರಿಯನ್ನು ಮಾಣಿಯಿಂದ ಕುಶಾಲನಗರದವರೆಗೆ ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು.
ಸಂಸದ ನಳಿನ್ ಕುಮಾರ್ ಮನವಿಗೆ ಸ್ಪಂದಿಸಿದ ಸಚಿವ ಗಡ್ಕರಿ 
ರಾ.ಹೆ. 75ರಲ್ಲಿ ಬಿ.ಸಿ.ರೋಡು – ಅಡ್ಡಹೊಳೆ ರಸ್ತೆ ಹಾಗೂ ರಾ.ಹೆ.169 ಸಣ್ಣೂರು – ಬಿಕರ್ನಕಟ್ಟೆ ರಸ್ತೆ ಚತುಷ್ಪಥ ಕಾಮಗಾರಿಗೆ ಈಗಾಗಲೇ ಟೆಂಡರ್ ಅಂತಿಮಗೊಂಡಿದೆ ಎಂದು ತಿಳಿಸಿದರು. ಭಾರತ್ ಮಾಲಾ ಯೋಜನೆಯಡಿ ದ್ವಿಪಥ ರಸ್ತೆಯಾಗಿರುವ ಮುಲ್ಕಿ- ಕಟೀಲು- ಕೈಕಂಬ- ಪೊಳಲಿ- ಬಿ.ಸಿ.ರೋಡು- ಪಾಣೆಮಂಗಳೂರು-ತೊಕ್ಕೊಟ್ಟು ಸಂಪರ್ಕಿಸುವ ಮಂಗಳೂರು ನಗರ ಹೊರವರ್ತುಲ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸುವುದಾಗಿ ಹಾಗೂ ಮಂಗಳೂರು-ಬೆಂಗಳೂರು ಸಂಪರ್ಕಿಸಲು ಪರ್ಯಾಯ ರಸ್ತೆಯಾಗಿರುವ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯನ್ನು ಮಾಣಿಯಿಂದ ಕುಶಾಲನಗರದವರೆಗೆ ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಪರಿಗಣಿಸುವುದಾಗಿ ಭರವಸೆ ನೀಡಿದರು ಹಾಗೂ ಅಧಿಕಾರಿಗಳಿಗೆ ಆದೇಶಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss