Thursday, June 30, 2022

Latest Posts

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದ ಬಗ್ಗೆ ಸಹೋದರ ಸತ್ಯನಾರಾಯಣ್ ಹೇಳಿದ್ದೇನು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಟ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಶುಕ್ರವಾರ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಇಂದು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ.

ಈ ಬಗ್ಗೆ ಅವರ ಸಹೋದರ ಸತ್ಯನಾರಾಯಣ ಅವರು ಮಾಹಿತಿ ನೀಡಿದ್ದು, “ರಜನಿ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದು ತಿಳಿಸಿದ್ದಾರೆ.

ನಿನ್ನೆ ಸಂಜೆ ರಜನಿಕಾಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿತ್ತು. ಆದರೆ ಕೊನೆಯಲ್ಲಿ ಆಸ್ಪತ್ರೆ ಪತ್ರಿಕಾ ಪ್ರಕಟಣೆ ಹೊರಡಿಸಿ ಇಂದು ಸಂಜೆ ಡಿಸ್ಚಾರ್ಜ್ ಮಾಡಲಾಗುವುದಾಗಿ ತಿಳಿಸಿದೆ.

ರಜನಿ ಅಭಿನಯಿಸುತ್ತಿದ್ದ ಅಣ್ಣಾತ್ತೆ ಚಿತ್ರದಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ರಜನಿ ಕೂಡ ಐಸೋಲೇಟ್ ಆಗಿದ್ದರು. ಈ ವೇಳೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss