ಹೊಸ ದಿಗಂತ ಆನ್ ಲೈನ್ ಡೆಸ್ಕ್
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಆರೋಗ್ಯ ತಪಾಸಣೆಗಾಗಿ ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರಜನಿಕಾಂತ್ ಆರೋಗ್ಯದಲ್ಲಿ ರಕ್ತದೊತ್ತಡ ಏರುಪೇರಾಗಿದ್ದರಿಂದ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಕೆಲವು ದಿನಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ನಟ ರಜನಿಕಾಂತ್ ಅವರಿಗೆ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿದ್ದರು.