Friday, July 1, 2022

Latest Posts

ಸೆಪ್ಟೆಂಬರ್ 19ರಂದು ಮೆಗಾ ಇ-ಲೋಕ್ ಅದಾಲತ್

ಯಾದಗಿರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಶಹಾಪುರ, ಸುರಪುರ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೆಪ್ಟೆಂಬರ್ 19ರಂದು ಮೇಗಾ ಇ-ಲೋಕ ಅದಾಲತ್ ಹಮ್ಮಿಕೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೋಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.19ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೇಗಾ ಇ-ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಪ್ರಯೋಜನಗಳು: ನಿಮ್ಮ ಕೇಸ್‍ಅನ್ನು ಮೇಗಾ ಇ-ಲೋಕ್ ಅದಾಲತ್‍ದ ಮೂಲಕ ಶೀಘ್ರವಾಗಿ ಇತ್ಯರ್ಥ, ನ್ಯಾಯಾಂಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರು ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು (ವ್ಯಾಜ್ಯ ಪೂರ್ವ ಪ್ರಕರಣಗಳು) ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕ(ಕೋರ್ಟ್ ಫಿ) ಕೊಡಬೇಕಾಗಿಲ್ಲ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನಾಯಾಲಯದ ಶುಲ್ಕವನ್ನು ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕೆ ಇದೊಂದು ವಿಶೇಷ ಅವಕಾಶ. ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಸಹ ನಾವು ತಮ್ಮ ವ್ಯಾಜ್ಯಗಳನ್ನು ಇ ಲೋಕ್ ಅದಾಲತ್‍ನ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ಪರಿಹಾರವನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಮಾಹಿತಿಗೆ ಸಂಪರ್ಕಿಸಿ: ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ (ಬಹುವಿಧ ಸೇವೆಗಳು-ಒಂದೇ ಸೂರಿನ ಅಡಿಯಲ್ಲಿ) ನ್ಯಾಯ ದೇಗುಲ ಮೊದಲನೆ ಮಹಡಿ, ಹೆಚ್. ಸಿದ್ಧಯ್ಯಾ ರಸ್ತೆ, ಬೆಂಗಳೂರ-560027, ದೂ:080-22111730 ಹಾಗೂ www.kslsa.kar.nic.in ಗೆ ಸಂಪರ್ಕಿಸಬಹುದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಹಾಗೂ ಸಹಾಯವಾಣಿ ಸಂಖ್ಯೆ 1800-425-90900ಗೆ ಸಂಪರ್ಕಿಸಬಹುದು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss